ಶವದ ಜೊತೆ ಲೈಂಗಿಕಕ್ರಿಯೆ ಮಾಡಿದರೆ ಅದು ಬಲವಂತವಾಗಲ್ಲ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
Feb 5, 2025, 19:23 IST
|

ಕೋರ್ಟಿನ ತೀರ್ಪು ಬದಲಾಗ್ತಿದೆ. ಹೌದು ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಇದೀಗ ಸುಪ್ರೀಂಕೋರ್ಟ್ ಸಹ ಎತ್ತಿಹಿದಿದೆ. ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ. ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್ ಇಂದು ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ.
21 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಆರೋಪಿಗಳು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಸಂಬಂಧ ಪೊಲೀಸರು ಕೊಲೆ ಜತೆ ಅತ್ಯಾಚಾರ ಕೇಸ್ ದಾಖಲಿಸಿದ್ದರು. ಆದ್ರೆ, ಹೈಕೋರ್ಟ್, ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದಿದೆ.
ಈ ಸಂಬಂಧ ಕಾನೂನು ರೂಪಿಸಲು ಸಂಸತ್ ಗೆ ಅವಕಾಶವಿದೆ. ಅಗತ್ಯವಿದ್ದರೆ ಸಂಸತ್ ಕಾನೂನು ರೂಪಿಸಬಹುದು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಪೀಠ ಅಭಿಪ್ರಾಯಪಟ್ಟಿದೆ.ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು 2023ರಲ್ಲಿ ತೀರ್ಪು ನೀಡಿತ್ತು. ಆದ್ರೆ, ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಮೃತದೇಹದ ಜೊತೆ ಸಂಭೋಗ ನಡೆಸಿದಂತಹ ಪ್ರಕರಣದಲ್ಲಿ ಅತ್ಯಾಚಾರ ಆರೋಪದಡಿ ಅಪರಾಧಿಗೆ ಶಿಕ್ಷೆ ವಿಧಿಸಲು ಯಾವುದೇ ನಿಯಮಗಳು ಇಲ್ಲವಾಗಿವೆ. ಐಪಿಸಿಯ ಕಲಂ 377ರ ಅಡಿಯಲ್ಲಿ ಜೀವಂತ ಪುರುಷ, ಮಹಿಳೆ ಅಥವಾ ಪ್ರಾಣಿಗಳ ಜೊತೆಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದರೆ, ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಆದ್ದರಿಂದ, ಈ ಕಲಂಗೆ ತಿದ್ದುಪಡಿ ತಂದು ಪುರುಷ, ಮಹಿಳೆ ಅಥವಾ ಪ್ರಾಣಿಗಳ ಮೃತದೇಹ ಎಂದು ಸೇರಿಸುವುದಕ್ಕೆ ಇದು ಸಕಾಲವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.