ಪವರ್ ಟಿವಿಯ 'ಪವರ್ ಕಟ್' ಮಾಡಿದ ಹೈಕೋರ್ಟ್; ಇನ್ನುಮುಂದೆ ಪ್ರಸಾರವಾಗದಂತೆ ಕೋರ್ಟ್ ತಡೆಯಾಜ್ಞೆ

 | 
Uu

ಸೌಜನ್ಯಾ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡಿ ಎಲ್ಲರ ಕಣ್ಣು ಕೆಂಪಗಾಗಿಸಿದ್ದ ಪವರ್ ಟಿವಿ ಪವರ್ ಇನ್ನಿಲ್ಲದಂತಾಗಿದೆ. ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ.

ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್‌ಆರ್‌ ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಈ ಮಹತ್ವದ ಆದೇಶ ನೀಡಿದೆ.ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ಗಳ  ಕಾಯಿದೆ - 1995ರ ಆದೇಶ ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು ಎಂದು ಕರ್ನಾಟಕ ಹೈಕೋರ್ಟ್‌ ಕಟ್ಟಪ್ಪಣೆ ನೀಡಿದೆ.

ಪ್ರಕರಣದ ಪ್ರತಿವಾದಿಯಾದ ಪವರ್‌ ಟಿವಿಯ ಮಾತೃ ಸಂಸ್ಥೆ ಮೆಸರ್ಸ್‌ ಪವರ್‌ ಸ್ಮಾರ್ಟ್‌ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ ಕಂಪನಿಯ ಪ್ರತಿನಿಧಿಯಾಗಿರುವ ಹೆಚ್ಚುವರಿ ನಿರ್ದೇಶಕ ರಾಕೇಶ್‌ ಸಂಜೀವ ಶೆಟ್ಟಿ ಅಲಿಯಾಸ್‌ ರಾಕೇಶ್‌ ಶೆಟ್ಟಿಗೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿ ಆದೇಶ ಹೊರಡಿಸಿತು.ಅರ್ಜಿದಾರರ ಪರ ಹೈಕೋರ್ಟ್‌ನ ಹಿರಿಯ ವಕೀಲರಾದ ಪ್ರಭುಲಿಂಗ ಕೆ ನಾವಡಗಿ, ಸಂದೇಶ್‌ ಜೆ ಚೌಟ ಹಾಗೂ ಡಿಆರ್‌ ರವಿಶಂಕರ್‌ ವಾದ ಮಂಡಿಸಿದ್ದಾರೆ.

ಪ್ರತಿವಾದಿ ರಾಕೇಶ್‌ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಅವರು ಚಾನೆಲ್‌ ಅನ್ನು ಕಾನೂನು ಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಚಾನೆಲ್‌ ಪರವಾನಗಿ ನವೀಕರಿಸಿಲ್ಲ, ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ. ಪವರ್ ಟಿವಿ ಮುಖ್ಯಸ್ಥರು ಮತ್ತು ನಿರೂಪಕರಾದ ರಾಕೇಶ್ ಶೆಟ್ಟಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ಎಚ್‌ಡಿ ದೇವೇಗೌಡರು, 

ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಬಗ್ಗೆ ಪವರ್ ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ ಅತ್ಯಂತ ಕೀಳು ಮಟ್ಟದಲ್ಲಿ, ಲಘುವಾಗಿ ಏಕವಚನದಲ್ಲಿ, ಅವಾಚ್ಯ ಶಬ್ದಗಳಿಂದ ಅವಮಾನ ಮಾಡಿ ಮಾತನಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.