ನಾನು ಒಬ್ಬ ಅಪ್ಪಟ ಹಿಂದೂ ಎಂದ ಡಿಕೆಶಿ, ಎದ್ದು ನಿಂತು ಸೆಲ್ಯೂಟ್ ಮಾಡಿದ ರಂಗಣ್ಣ

 | 
Nx
ಪ್ರಯಾಗ್​ರಾಜ್​ನ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ್ಯ. ಮಹಾಶಿವರಾತ್ರಿಯಂದು ಶಿವ ಧ್ಯಾನ.. ಡಿಕೆ.ಶಿವಕುಮಾರ್​. ಕರ್ನಾಟಕದ ಡಿಸಿಎಂ. ಕಾಂಗ್ರೆಸ್​ನ ರಾಜ್ಯಾಧ್ಯಕ್ಷರು. ಇವರ ಒಂದೊಂದು ನಡೆಯೂ ರಾಜಕೀಯದಲ್ಲಿ ನಾನಾ ಅರ್ಥಗಳು.. ಚರ್ಚೆಗಳಿಗೆ ನಾಂದಿ ಆಗ್ತಿದೆ. ಕೆಲ ದಿನಗಳ ಹಿಂದೆ ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನದ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಲೇವಡಿ ಮಾಡಿದ್ರು. 
ಸದ್ಗುರು ಜಗ್ಗಿ ವಾಸುದೇವ ಅವರ ಈಶಾ ಫೌಂಡೇಷನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ಅಗಿರುವುದು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರೇ ಪ್ರತಿಕ್ರಿಯೆ ಕೊಡುತ್ತಿದ್ದು, ಡಿಕೆಶಿ ಭಾಗಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಏನೇನೋ ಹಾಕುತ್ತಾರೆ ಎಂದು ಡಿಕೆಶಿ ಹೇಳಿಕೆ ಬೆನ್ನಲ್ಲೇ ಎಐಸಿಸಿ‌ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಬಹಿರಂಗವಾಗಿಯೇ ಅಸಮಾಧಾನ‌ ಹೊರಹಾಕಿದ್ದಾರೆ. ಪಕ್ಷದ ತತ್ವ ಸಿದ್ದಾಂತ ಹಾಗೂ ರಾಹುಲ್ ಗಾಂಧಿ ಅವರ ತತ್ವಕ್ಕೆ ವಿರುದ್ದವಾದ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಡಿ.ಕೆ.ಶಿವಕುಮಾರ್​, ಅಮಿತ್​ ಶಾ ಜೊತೆ ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಅನ್ನೋ ವಿಷ್ಯ ಬಹಿರಂಗವಾಗ್ತಿದ್ದಂತೆ, ಕಾಂಗ್ರೆಸ್​ನಲ್ಲೇ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಡಿಕೆಶಿ ಬಿಜೆಪಿಗೆ ಹತ್ತಿರವಾಗ್ತಿದ್ದಾರೆ ಎಂಬೆಲ್ಲ ಚರ್ಚೆಗಳು ಶುರುವಾಗಿದ್ವು.. ಇದಕ್ಕೆಲ್ಲ ಸ್ಪಷ್ಟನೆ ನೀಡಿದ್ದ ಡಿಕೆಶಿ, ಸದ್ಗುರು ಜಗ್ಗಿ ವಾಸುದೇವ್​ ನಮ್ಮ ಮೈಸೂರಿನವರು. ನಮ್ಮ ಮನೆಗೆ ಬಂದು ಆಹ್ವಾನ ನೀಡಿದ್ದರು. ನಾನಿನ್ನೂ ಅಮಿತ್​ ಶಾರನ್ನ ಭೇಟಿ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.