ದ ರ್ಶನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಬಂದೆ; ನ ಟ ವಿನೋದ್ ಪ್ರಭಾಕರ್

 | 
U

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಹೆಸರು ಬಂದಾಗಿನಿಂದಲೂ ನೆಟ್ಟಿಗರು ವಿನೋದ್ ಪ್ರಭಾಕರ್  ಯಾಕೆ ರಿಯಾಕ್ಟ್ ಮಾಡಿಲ್ಲ ಎಂದು ಕೇಳುತ್ತಲೇ ಇದ್ದರು. ಇದೀಗ ನಟ ವಿನೋದ್ ಪ್ರಭಾಕರ್ ಅವರು ನಟ ದರ್ಶನ್ ಭೇಟಿ ಮಾಡಿದ್ದಾರೆ. ಜೈಲಿಗೆ ಬಂದು ದರ್ಶನ್ ಅವರನ್ನು ಮಾತನಾಡಿಸಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಿ ಮರಳಿ ಬಂದ ವಿನೋದ್ ಪ್ರಭಾಕರ್ ಅವರು ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ದರ್ಶನ್ ಅವರನ್ನು ಮಾತನಾಡಿಸಿ ಕಾರಿನಲ್ಲಿ ಹಿಂತಿರುಗಿದ ವಿನೋದ್ ಪ್ರಭಾಕರ್ ನಟ ದರ್ಶನ್ ಭೇಟಿ ಬಳಿಕ ಹೇಳಿಕೆ ಕೊಟ್ಟಿದ್ದಾರೆ. ಮೃತ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ನೀಡಲಿ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಕ್ರೈಂ ಪೇದೆ ಗಣೇಶ್, ಅವರನ್ನು ಭೇಟಿ ಮಾಡಿ ವಿಶೇಷ ಆತಿಥ್ಯದ ಮೂಲಕ ಜೈಲಿನೊಳಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಮುಂದಾಗಿದ್ದಾರೆ. ಇನ್ನು ನಟ ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂಬ ಮಾತು ಕೂಡ ಕೇಳಿಬರುತ್ತಿವೆ.

ಕಾನೂನಿಗಿಂತ ಯಾರು ದೊಡ್ಡವರಿಲ್ಲ ಎಲ್ಲರಿಗೂ ನ್ಯಾಯ ಸಿಗಲಿ. ನನಗೆ  ದೇವರ ಮೇಲೆ ಅಪಾರವಾದ  ನಂಬಿಕೆ ಇದೆ. ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಕಳೆದಿದೆ. ನಾನು ನನ್ನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೆ. ನ್ಯೂಸ್ ನಲ್ಲಿ ನೋಡಿದ ಮೇಲೆ ನನಗೆ ಈ ಪ್ರಕರಣದ ಬಗ್ಗೆ ಗೊತ್ತಾಯ್ತು. ಅಂದ್ರೆ ಅವತ್ತು ನನಗೆ ನ್ಯೂಸ್ ನೋಡಿ ಶಾಕ್ ಆಯ್ತು ಎಂದಿದ್ದಾರೆ. ಇನ್ನು ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ನಟ ದರ್ಶನ್‌ ಭೇಟಿಯಾಗಲು ಬಂದಿದ್ದ ವಿಜಯಲಕ್ಷ್ಮಿಗೆ ಜೈಲಿನ ಸಿಬ್ಬಂದಿ ವಿಶೇಷ ಆತಿಥ್ಯ ನೀಡಿದ್ದಾರೆ. ದರ್ಶನ್ ಬೇಟಿಗೆ ಆಗಮಿಸಿರುವ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ಅವರು ಮಾಧ್ಯಮದವರ ಕ್ಯಾಮೆರಾಗಳನ್ನು ನೋಡಿ ತುಸು ದೂರದಲ್ಲಿ ಕಾರನ್ನು ನಿಲ್ಲಿಸಿದ್ದರು.

ರೇಣುಕಾಸ್ವಾಮಿ ಫ್ಯಾಮಿಲಿ ಒಂದು ಕಡೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಇತ್ತ ದರ್ಶನ್ ಕುಟುಂಬದ ಜೊತೆಗೆ ಅಭಿಮಾನಿಗಳು ಕೂಡ ನೋವಿನಲ್ಲಿದ್ದಾರೆ. ಯಾರಿಗೆ ಸಾಂತ್ವನ ಹೇಳಬೇಕು ಅಂತ ತಿಳಿಯಲಿಲ್ಲ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಾಗಿ ಮಾತನಾಡಲು ಆಗುತ್ತಿಲ್ಲ ಎಂದಿದ್ದಾರೆ. ಅವರ ಮುಖ ನೋಡಿಕೊಂಡು ಬರಲು ಹೋಗಿದ್ದೆ. ಒಂದು ಕ್ಷಣ ಅವರ ಮುಖ ನೋಡಿ ಶೆಕ್ ಹ್ಯಾಂಡ್ ಮಾಡಿ ಬಂದೆ. ಎಲ್ಲರಿಗೂ ಭಗವಂತ ಒಳ್ಳೆಯದನ್ನ ಮಾಡಲಿ. ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುವುದು ಕಾನೂನಿನಲ್ಲಿದೆ. ನನ್ನ ಪ್ರಕಾರ ಎಲ್ಲರಿಗೂ ಒಳ್ಳೆಯದು ಆಗುತ್ತೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.