ನಾಳೆ ನಾನು ಇರುತ್ತೇನೋ ಗೊತ್ತಿಲ್ಲ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹೇಳಿಕೆ ಬಾರಿ ವೈರಲ್

 | 
Hji
 ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಬಹುಭಾಷಾ ನಟಿ ಎಂದೇ ಕರೆಸಿಕೊಳ್ಳುವ ರಶ್ಮಿಕಾ ಮಂದಣ್ಣ ಅವರು ಇತ್ತೀಚಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರಲಿಲ್ಲ. ಈ ನಡುವೆ ಸಾರ್ವಜನಿಕವಾಗಿ ಕೂಡಾ ಅವರು ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಈಗ ಅವರು ತಿಳಿಸಿದ್ದಾರೆ.
ಕಳೆದ ತಿಂಗಳು ನನಗೆ ಚಿಕ್ಕ ಅಪಘಾತ ಆಯಿತು. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ಚೇತರಿಸಿಕೊಂಡೆ. ಈಗ ನಾನು ಚೆನ್ನಾಗಿದ್ದೇನೆ ಎಂದು ರಶ್ಮಿಕಾ ಮಂದಣ್ಣ ಅವರು ಅಭಿಮಾನಿಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ತುಂಬಾ ದಿನಗಳಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೇನೆ. ಇದಕ್ಕೆ ಬಲವಾದ ಕಾರಣ ಕೂಡ ಇದೆ ಎನ್ನುವ ಮೂಲಕ ಇತ್ತೀಚೆಗಷ್ಟೇ ತನಗೆ ಅಪಘಾತವಾಯಿತು ಎಂದು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಬಹಿರಂಗಪಡಿಸಿದ್ದಾರೆ.
ಒಂದು ತಿಂಗಳು ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರಲಿಲ್ಲ. ಸಣ್ಣ ಅಪಘಾತವೇ ಇದಕ್ಕೆ ಕಾರಣ. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದೇನೆ. ಸದ್ಯದಲ್ಲೇ ಮತ್ತೆ ಬಿಜಿಯಾಗುತ್ತೇನೆ. ಮತ್ತೆ ಹೊಸ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತೇನೆ.ಬದುಕು ಬಹಳ ಅಮೂಲ್ಯವಾಗಿದ್ದು, ತುಂಬಾ ಹುಷಾರಾಗಿರಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. 
ಜೀವನದಲ್ಲಿ ಏನಾಗುತ್ತದೆ ಎಂದು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಏಕೆಂದರೆ, ಜೀವನ ತುಂಬಾ ಅನಿರೀಕ್ಷಿತವಾಗಿದೆ. ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ, ಇಂದು ನೆಮ್ಮದಿಯಿಂದ ಬದುಕಬೇಕು ಎಂದು ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ರಶ್ಮಿಕಾ ಬರೆದುಕೊಂಡಿದ್ದಾರೆ.
 ಅಲ್ಲದೆ, ಶೀಘ್ರದಲ್ಲೇ ಹೊಸ ಸಿನೆಮಾ ಬಗ್ಗೆ ಅಪ್​ಡೇಟ್​ ಕೊಡುವುದಾಗಿ ತಿಳಿಸಿದ್ದಾರೆ. ಸದ್ಯ ಪುಷ್ಪ 2, ಸಿಕಂದರ್​,ಛಾವ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಅವರ ಕೈಯಲ್ಲಿ ಇವೆ. ಅಷ್ಟೇ ಅಲ್ಲದೇ ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.