ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

 | 
Dff

ಮಹಿಳಾ ವರ್ಗವನ್ನೇ ತಲೆತಗ್ಗಿಸುವಂತೆ ಮಾಡಿರುವ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ವಿರುದ್ಧ ಕರ್ನಾಟಕದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಹಲವೆಡೆಗಳಲ್ಲಿ ಪ್ರತಿಭಟನೆಗಳೂ ನಡೆಯುತ್ತಿವೆ. ಈ ಕೂಡಲೇ ಆರೋಪಿ ಸ್ಥಾನದಲ್ಲಿರುವವರನ್ನು ಬಂಧಿಸುವಂತೆಯೂ ಆಗ್ರಹಿಸುತ್ತಿದ್ದಾರೆ. 

ಅಚ್ಚರಿಯ ಬೆಳವಣಿಗೆಯಲ್ಲಿ ತಂದೆ ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ತಲೆ ಮರೆಸಿಕೊಂಡಿದ್ದ ಎಚ್‌ಡಿ ರೇವಣ್ಣ ಅವರನ್ನು ಅತ್ಯಾಚಾರ ಸಂತ್ರಸ್ತೆಯ ಅಪಹರಣ ಕೇಸ್‌ನಡಿ ಶನಿವಾರ ಬಂಧಿಸಲಾಗಿದೆ.ಈ ನಡುವೆ ಇದೇ ಪ್ರಕರಣಕ್ಕೆ ರಾಜಕೀಯ ಲೇಪನ ಮಾಡಲಾಗುತ್ತಿದ್ದು, ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜಕೀಯ ಮಂದಿಯ ಹೇಳಿಕೆಯ ಜತೆಗೆ ಸಿನಿಮಾ ಮಂದಿಯೂ ರೊಚ್ಚಿಗೆದ್ದಿದ್ದಾರೆ.

 ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳೂ ಈ ಬಗ್ಗೆ ಧ್ವನಿ ಎತ್ತಿದ್ದು, ಬಾಲಿವುಡ್‌ ನಟಿ ಸ್ವರಾ ಭಾಸ್ಕರ್‌ ಸಹ ಒಂದು ವೇಳೆ ಪ್ರಜ್ವಲ್‌ ರೇವಣ್ಣ ಮುಸ್ಲಿಂ ಆಗಿದ್ದರೆ ಸುಮ್ನೆ ಬಿಡ್ತಿದ್ರಾ? ಎಂದು ಕೇಂದ್ರದ ಮೋದಿ ಸರ್ಕಾರಕ್ಕೆ ತಿವಿದಿದ್ದರು. ಈಗ ನಟಿ ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ ಸಹ ಮೌನ ಮುರಿದಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ಬಗ್ಗೆ ಕೊಂಚ ಬೇಸರದಲ್ಲಿಯೇ ಸೋಷಿಯಲ್‌ ಮೀಡಿಯಾ ಟ್ವಿಟರ್‌ನಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡಿರುವ ಹರ್ಷಿಕಾ, ಇದೊಂದು ಹೀನ ಕೊಳಕು ಕೃತ್ಯ. ಈ ವಿಡಿಯೋದಲ್ಲಿ ಇರುವ ಅಸಂಖ್ಯಾತ ಮಹಿಳೆಯರು ಪಾಪದವರು ಎಂದು ಹರ್ಷಿಕಾ ಬರೆದುಕೊಂಡು, ಸಂಬಂಧಪಟ್ಟವರು ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.