5 ವರ್ಷ ನಾನೇ CM ಎಂದ ಸಿದ್ದು, ತಲೆಕೆಡಿಸಿಕೊಂಡ ಡಿಕೆಶಿ ಹೇಳಿದ್ದೇನು ಗೊತ್ತಾ

 | 
Hgg

ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ  ಬದಲಾಗುತ್ತಾರೆ. ಈಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ, ಈಗ ಆ ಎಲ್ಲ ಗೊಂದಲಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಮುಂದಿನ ಐದು ವರ್ಷವೂ ನಾನೇ ಸಿಎಂ ಎಂದು ಹೇಳಿದ್ದಾರೆ. 

ಹೊಸಪೇಟೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ.
ಆಗ ಮಾಧ್ಯಮದವರು, ಐದು ವರ್ಷ ನೀವೇ ಸಿಎಂ ಆಗಿರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಹೌದು, ನಾನೇ ಐದು ವರ್ಷ ಸಿಎಂ ಆಗಿರುತ್ತೇನೆ ಎಂದು ಗಟ್ಟಿ ಧ್ವನಿಯಲ್ಲಿ ಹೇಳಿದರು. 

ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ವಿಚಾರ ತೀರ್ಮಾನ ಮಾಡೋದು ಹೈಕಮಾಂಡ್‌ ಆಗಿದೆ. ನಮ್ಮದು ನ್ಯಾಷನಲ್ ಪಾರ್ಟಿ. ಏನೇ ತೀರ್ಮಾನ ಆದರೂ ಹೈಕಮಾಂಡ್ ಜತೆ ಚರ್ಚೆ ಮಾಡಿಯೇ ಆಗುತ್ತದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಅಧಿಕಾರ ಹಂಚಿಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 

ಸಿದ್ದರಾಮಯ್ಯ ಅವರ ಈ ಹೇಳಿಕೆ ಡಿ.ಕೆ ಶಿವಕುಮಾರ್ ಬಣ ಹಾಗೂ ರಾಜ್ಯ ರಾಜಕೀಯದಲ್ಲಿ ಹಲ್​ ಚಲ್ ಎಬ್ಬಿಸಿದೆ.ಈಗ ಎಲ್ಲರ ಚಿತ್ತವು ಡಿ.ಕೆ. ಶಿವಕುಮಾರ್‌ ಅವರತ್ತ ನೆಟ್ಟಿದೆ. ಅವರು ಚುನಾವಣೆಗೆ ಮೊದಲೇ ಪ್ರಚಾರ ಕಾರ್ಯಕ್ರಮದಲ್ಲಿ ತಾವು ಮುಖ್ಯಮಂತ್ರಿಯಾಗಲು ಇದು ಒಳ್ಳೆಯ ಸಮಯ ಹೀಗಾಗಿ ತಮ್ಮ ಸಮುದಾಯದವರೆಲ್ಲರೂ ನನ್ನನ್ನು ಬೆಂಬಲಿಸಿ ಎಂದು ಕೋರಿದ್ದರು. ಈ ಮೂಲಕ ಸಿಎಂ ಹುದ್ದೆ ಏರಲು ಉತ್ಸುಕರಾಗಿದ್ದರು. 

ಅಲ್ಲದೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೊದಲು ಸಚಿವ ಎಂ.ಬಿ. ಪಾಟೀಲ್‌ ಸೇರಿ ಹಲವರು ಪೂರ್ಣಾವಧಿ ಸಿಎಂ ಬಗ್ಗೆ ಪ್ರಸ್ತಾಪ ಮಾಡಿದಾಗ ಡಿಕೆ ಬ್ರದರ್ಸ್‌ ಕಿಡಿಕಾರಿದ್ದರು. ಆದರೆ, ಎರಡು ದಿನಗಳ ಹಿಂದೆ ಕೆಪಿಸಿಸಿ ಕಚೇರಿಯಲ್ಲಿ ಕೆಲವರ ಪಕ್ಷ ಸೇರ್ಪಡೆ ಮಾಡಿಕೊಳ್ಳುವಾಗ ಮಾತನಾಡಿದ್ದ ಡಿ.ಕೆ. ಶಿವಕುಮಾರ್‌, ನನಗೆ ಅಧಿಕಾರ ಸಿಗುತ್ತದೆಯೋ? ಸಿಗುವುದಿಲ್ಲವೋ? ಅದರ ಬಗ್ಗೆ ಕಾರ್ಯಕರ್ತರು ತೆಲೆ ಕೆಡಿಸಿಕೊಳ್ಳುವುದು ಬೇಡ. ಎಲ್ಲರೂ ಒಟ್ಟಾಗಿ ಪಕ್ಷಕ್ಕಾಗಿ ದುಡಿಯೋಣ ಎಂದು ಹೇಳಿಕೆ ನೀಡಿದ್ದರು. 

ಆದರೆ, ಈಗ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಡಿ.ಕೆ. ಶಿವಕುಮಾರ್‌ ಮತ್ತು ಬಣದವರು ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದು ಮುಂದಿನ ರಾಜಕೀಯ ಬೆಳವಣಿಗೆಯನ್ನು ನಿರ್ಧರಿಸುತ್ತದೆ. ಒಟ್ಟಿನಲ್ಲಿ ಮಾಧ್ಯಮದ ಮುಂದೆ ಹೈಕಮಾಂಡ್ ನಿರ್ಧಾರ ಎಂದು ಹೇಳಿ ಡಿಕೆಶಿ ತಪ್ಪಿಸಿಕೊಂಡಂತಿತ್ತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.