ಸಿನಿಮಾ ರಂಗಕ್ಕೆ ಬರಬೇಕು ಅಂದ್ರೆ ಎಲ್ಲದಕ್ಕೂ ರೆಡಿ ಇಬೇ೯ಕು, ಬಿಗ್ಬಾಸ್ ಹಂಸ ಓಪನ್ ಟಾಕ್

 | 
ಹಾ
 ರಾಜಿ ಉರ್ಫ್​ ರಾಜೇಶ್ವರಿ ಎಂದಾಕ್ಷಣ ಧಾರಾವಾಹಿ ಪ್ರಿಯರ ಕಣ್ಣಮುಂದೆ  ಪುಟ್ಟಕ್ಕನ ಮಕ್ಕಳ ಧಾರಾವಾಹಿಯ ವಿಲನ್​. ರಾಜೇಶ್ವರಿ ಎಂದಾಕ್ಷಣ ಈ ಪಾತ್ರವೇ ಹಾದುಹೋಗುವಷ್ಟರ ಮಟ್ಟಿಗೆ  ರಾಜಿ ಪಾತ್ರ ಜೀವ ತುಂಬಿದೆ. ಗಂಡ ಇಲ್ಲದಿದ್ದರೂ ಕ್ಷಣ ಕ್ಷಣಕ್ಕೂ ನೋವನ್ನೇ ಪುಟ್ಟಕ್ಕ ಅನುಭವಿಸುತ್ತಿದ್ದರೂ ಅವರ ಮನೆಯ ಸಮೀಪವೇ ಇದ್ದು, ಕ್ಷಣ ಕ್ಷಣಕ್ಕೂ ಆಕೆಗೆ ತೊಂದರೆ ಕೊಡುವಲ್ಲಿ ಈ ಸವತಿ ರಾಜೇಶ್ವರಿಯದ್ದು ಎತ್ತಿದ ಕೈ. 
ಪುಟ್ಟಕ್ಕನ ಪತಿಯನ್ನು ಬುಟ್ಟಿಗೆ ಹಾಕಿಕೊಂಡು ಮದುವೆಯಾದರೂ ಪುಟ್ಟಕ್ಕನಿಗೆ ತೊಂದರೆ ಕೊಡುವುದು ಎಂದರೆ ಈಕೆಗೆ ಅದೇನೋ ಖುಷಿ. ರಾಜೇಶ್ವರಿ ಬಂದರೆ ಅದೆಷ್ಟೋ ಮನೆಯಲ್ಲಿ ಆಕೆಗೆ ಹಿಡಿಶಾಪ ಹಾಕುವುದೂ ಇದೆ. ಥೇಟ್​ ವಿಲನ್​ನಂತೆ ಪಾತ್ರ ಮಾಡಿ ಆ ಪಾತ್ರಕ್ಕೆ ಜೀವ ತುಂಬುತ್ತಿರುವ ಈ ರಾಜೇಶ್ವರಿಯವರ ನಿಜವಾದ ಹೆಸರು ಹಂಸ ನಾರಾಯಣಸ್ವಾಮಿ ಅಥವಾ ಹಂಸ ಪ್ರತಾಪ್​.
ಇನ್ನು ಹಂಸ ಅವರ ಕುರಿತು ಹೇಳುವುದಾದರೆ, ಅವರು ಈ ಹಿಂದೆ, ಧ್ರುವ, ಅಮ್ಮ, ರಾಜಾಹುಲಿ, ಸಖತ್​, ಜೇಮ್ಸ್, ಉಂಡೆನಾಮ ​ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ರಿಯಾಲಿಟಿ ಷೋಗಳಲ್ಲಿಯೂ ಭಾಗಿಯಾಗಿದ್ದಾರೆ.   ಹಂಸ ಅವರು ಕೆಲವೊಮ್ಮೆ ತಮ್ಮ ಪತಿ ಹಾಗೂ ಹಲವು ಬಾರಿ ಪುಟ್ಟಕ್ಕನ ಮಕ್ಕಳು ಸೀರಿಯಲ್​ನಲ್ಲಿ ತಮ್ಮನ ಪಾತ್ರದಲ್ಲಿ ನಟಿಸ್ತಿರೋ ಕಾಳಿಯ ಜೊತೆ ರೀಲ್ಸ್​ ಮಾಡುತ್ತಾರೆ.  
ಇನ್ನು ಇವರೇ ಹೇಳಿರುವ ಪ್ರಕಾರ ಇವರಿಗೆ ನೋಡಲು ಅಂದ ಚಂದ ಎಲ್ಲವೂ ಇತ್ತು. ಆದರೆ ಸಿನಿಮಾ ರಂಗದಲ್ಲಿ ಮಿಂಚಬೇಕು ಅಂದರೆ ಅವರು ಹೇಳಿದಂತೆಲ್ಲ ಅಡ್ಜೆಸ್ಟ್ ಮಾಡಿಕೊಳ್ಳಬೇಕು. ಹಾಗಾಗಿ ಮೊದಲಿನಿಂದಲೂ ಸಿನಿಮಾ ಇಂದ ದೂರವೇ ಉಳಿದಿದ್ದೆ. ಆದರೆ ಈದೀಗ ಅಮ್ಮನ ಪಾತ್ರಕ್ಕೆ ಆಫರ್ ಬರ್ತಿದೆ ಹಾಗಾಗಿ ನಟಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಂದಹಾಗೆ ಹಂಸ ಅವರು, ನಟಿ, ಅನೇಕ ಆ್ಯಂಗಲ್​ಗಳಲ್ಲಿ, ಬಗೆಬಗೆಯ ಡ್ರೆಸ್​ ತೊಟ್ಟು ಹಂಸ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಲೇ ಇದ್ದಾರೆ. ಇಂದು ಕೂಡ ಹಲವಾರು ರೀತಿಯ ಡ್ರೆಸ್​ಗಳಲ್ಲಿ ಅವರು ಫೋಟೋಶೂಟ್​ ಮಾಡಿಸಿಕೊಂಡು ಅದನ್ನು ಶೇರ್​ ಮಾಡಿಕೊಡುತ್ತಿರುತ್ತಾರೆ. 
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.