ನಡು ರಸ್ತೆಯಲ್ಲಿ ಅ ಶ್ಲೀಲ ಭಂಗಿ ಮಾಡಿದ ಯುವತಿ, ರೊ.ಚ್ಚಿಗೆದ್ದ IPS ಅಧಿಕಾರಿ

 | 
ಕಿ

ಇಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ರಾತ್ರೋ ರಾತ್ರಿ ಸ್ಟಾರ್ ಆಗಲು ಇನ್ನಿಲ್ಲದ ಹುಚ್ಚಾಟವನ್ನು ನಡೆಸುತ್ತಾರೆ. ರೀಲ್ಸ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡವರು ಅನೇಕರಿದ್ದಾರೆ. ರೀಲ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡು ಜೈಲು ಸೇರಿದವರು ಸಹ ಇದ್ದಾರೆ. ಇದೀಗ ಯುವತಿಯೊಬ್ಬಳ ರೀಲ್ಸ್ ಹುಚ್ಚಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ಯುವತಿಯೊಬ್ಬಳು ಸಂಚಾರ ದಟ್ಟಣೆ ಇರುವ ಟ್ರಾಫಿಕ್ ಸಿಗ್ನಲ್ ಬಳಿ ಬಂದು ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾಳೆ. ಈ ವಿಡಿಯೋ ನೋಡಿದ ಬಹುತೇಕರು ಯುವತಿಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸುರಕ್ಷತೆ ಬಗ್ಗೆ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅರಿವು ಮೂಡಿಸುತ್ತಿರುವ ಸಂದರ್ಭದಲ್ಲಿ ಯುವತಿ ಈ ರೀತಿ ಮಾಡಿರುವುದು ಅನೇಕರನ್ನು ಕೆರಳಿಸಿದೆ.

ರಾಜಾ ಬಾಬು ಎನ್ನುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಯುವತಿ ಜನನಿಬಿಡ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ದ್ವಿಚಕ್ರ ವಾಹನಗಳು ಮತ್ತು ಆಟೋ ರಿಕ್ಷಾಗಳು ಸಾಗುತ್ತಿರುವ ರಸ್ತೆಯಲ್ಲಿ ತನ್ನ ಬ್ಯಾಗ್‍ಅನ್ನು ಪಕ್ಕಕ್ಕೆ ಎಸೆದು ರಸ್ತೆಯ ಮೇಲೆ ನೃತ್ಯ ಮಾಡಲು ಶುರುಮಾಡುತ್ತಾಳೆ.

ಟ್ರಾಫಿಕ್ ನಿಲುಗಡೆ ಸಮಯದಲ್ಲಿ  ವಾಹನಗಳು  ನಿಂತಿರುವಾಗ ಯುವತಿ ಡ್ಯಾನ್ಸ್ ಮಾಡಿದ್ದಾಳೆ. ಇದು ಯಾವ ಪ್ರದೇಶದಲ್ಲಿ ನಡೆದಿದೆ ಅನ್ನೋದು ತಿಳಿದುಬಂದಿಲ್ಲ. ಆದರೆ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ವಿಡಿಯೋ ನೋಡಿದ ಬಹುತೇಕರು ಯುವತಿಯ ನಡೆಯನ್ನು ಖಂಡಿಸಿದ್ದು, ಈ ರೀತಿಯ ಹುಚ್ಚಾಟ ಮಾಡುವುದನ್ನು ನಿಲ್ಲಿಸಬೇಕು. 

ಇಂತವರ ವಿರುದ್ಧ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆಯ ಬಗ್ಗೆ ಐಪಿಎಸ್ ಅಧಿಕಾರಿ ಎನ್ಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ್ ಸಜ್ಜನರ್ ಕಿಡಿಕಾರಿದ್ದಾರೆ. ಇಂದಿನ ಯುವ ಜನಾಂಗ ಇಂತಹ ಹುಚ್ಚಾಟ ಮಾಡದಿರಲಿ ಎಂದಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.