ಕೊನೆಗೂ ಬಿಗ್ಬಾಸ್ ಬಿಟ್ಟ ಜಗದೀಶ್, ಲೈವ್ ಬಂದು ಫಸ್ಟ್ ರಿಯಾಕ್ಷನ್

 | 
ಹಾ
 ಹಲವರ ಪ್ರಿಯವಾದ ಇನ್ನು ಕೆಲವರಿಗೆ ಕೋಪತರಿಸಿದ ಬಿಗ್ಬಾಸ್ ಶೋ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುವಂತಿದೆ.ಬಿಗ್​ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ.
 ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ. ಅಷ್ಟಕ್ಕೂ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್​ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು ಅಂದಿದ್ದಾರೆ.
ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದು ಹೇಳಿದ್ದಾರೆ.
ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೆ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ. 
ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೆ. ವೈಯಕ್ತಿಕ ದ್ವೇಷ ಯಾವುದೂ ಇಲ್ಲ ಎಂದಿದ್ದಾರೆ ಜಗದೀಶ್. ಮಾಧ್ಯಮಗಳನ್ನು ಭೇಟಿ ಆಗಲು ಕಾಯುತ್ತಿದ್ದೇನೆ ಎಂದಿರುವ ಜಗದೀಶ್, ಭಾನುವಾರದಂದು ಜಕ್ಕೂರು ಏರೋಸ್ಪೇಸ್​ ಬಳಿ ಸುದ್ದಿಗೋಷ್ಠಿ ನಡೆಸಲಿದ್ದೇನೆ ಎಂದು ತಿಳಿಸಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.