ಕನ್ನಡಿಗರಿಗೆ ನಿದ್ದೆ ಇಲ್ಲದಂತೆ ಮಾಡಿದ ಜ್ಯೋತಿ ರೈ;

 | 
Hh
ಸಾಮಾಜಿಕ ಜಾಲತಾಣ ಮನುಷ್ಯನನ್ನು ಹೆಚ್ಚು ಕಂಟ್ರೋಲ್ ಮಾಡುತ್ತಿರುವ ಮಾಧ್ಯಮ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ. ಇನ್ನು ಈ ವೇದಿಕೆಯ ಮೂಲಕವೇ ಚಿತ್ರರಂಗದ ಅನೇಕರು ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವುದು ಅಲ್ಲದೇ ತಮ್ಮ ಅಭಿಮಾನಿಗಳ ಜೊತೆ ನಿತ್ಯ ಸಂಪರ್ಕದಲ್ಲಿರುವ ಸಾಧನವನ್ನಾಗಿಯೂ ಈಗೀಗ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ.
ಆದರೆ ಇದನ್ನೇ ದುರ್ಬಳಕೆ ಮಾಡಿಕೊಳ್ಳುವ ಅನೇಕರು ಮಹಿಳೆಯರಿಗೆ ಲೈಂಗಿಕ ಶೋಷಣೆ, ಕಿರುಕುಳ ಕೊಡುವುದನ್ನೇ ವೃತ್ತಿಯನ್ನಾಗಿಸಿ ಸಾಕಷ್ಟು ಸ್ತ್ರೀಯರ ಬಾಳಿಗೆ ಕಗ್ಗಂಟಾಗಿ ಉಳಿದಿದ್ದಾರೆ. ಇದಕ್ಕೆ ಉದಾಹರಣೆಯಾಗಿ ದರ್ಶನ್ ಪ್ರಕರಣ ಕಣ್ಮುಂದೆಯೇ ಇದೆ. ಹೀಗಿರುವಾಗ ಸೋಶಿಯಲ್ ಮೀಡಿಯಾ ಸ್ಟಾರ್ ಜ್ಯೋತಿ ರೈ ಇದೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕೆಂಡವನ್ನೂ ಕಾರಿದ್ದಾರೆ.
ಹೌದು, 'ಅನುರಾಗ ಸಂಗಮ', 'ಜೋಗುಳ', 'ಗೆಜ್ಜೆಪೂಜೆ', 'ಲವಲವಿಕೆ', 'ಕನ್ಯಾದಾನ', 'ಗೆಜ್ಜೆಪೂಜೆ', 'ಪ್ರೇರಣಾ', 'ಕಿನ್ನರಿ', 'ಮೂರು ಗಂಟು', 'ಕಸ್ತೂರಿ ನಿವಾಸ' ಸೇರಿ 18ಕ್ಕೂ ಹೆಚ್ಚು ಕನ್ನಡದ ಧಾರಾವಾಹಿಯ ಮೂಲಕ ಕನ್ನಡಿಗರ ಹೃದಯವನ್ನೂ ಗೆದ್ದು, ಸದ್ಯ ಆಂಧ್ರದಲ್ಲಿ ಪುರಸೊತ್ತಿಲ್ಲದ ಬದುಕಿನಲ್ಲಿ ಕಳೆದು ಹೋಗಿರುವ ಜ್ಯೋತಿ ರೈ ಸದ್ಯಕ್ಕೆ ತಮಗಾದ ಕಹಿ ಅನುಭವ ಹಂಚಿಕೊಂಡಿದ್ದಾರೆ. ತೀರಾ ಅಶ್ಲೀಲವಾಗಿ ಸಂದೇಶ ಕಳಿಸುತ್ತಿದ್ದ 1000ಕ್ಕೂ ಹೆಚ್ಚಿನ ಅಕೌಂಟ್‌ಗಳನ್ನು ಬ್ಲಾಕ್ ಮಾಡಿರುವುದಾಗಿ ಹೇಳಿದ್ದಾರೆ.
ಈ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜ್ಯೋತಿ ರೈ, ತುಂಬಾನೇ ಕೆಟ್ಟದಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಒಂದು ಸಾವಿರಕ್ಕೂ ಅಧಿಕ ವ್ಯೆಯಕ್ತಿಕ ಖಾತೆಗಳನ್ನೂ ನಾನು ನನ್ನ ಇನ್ಸ್ಟಾಗ್ರಾಮ್‌ನಲ್ಲಿ ಬ್ಲಾಕ್ ಮಾಡಿದ್ದೇನೆ ಎಂದಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಜೊತೆ ಚರ್ಚೆ ಮಾಡುವುದು ನನಗೆ ಇಷ್ಟ ಇಲ್ಲ ಎಂದಿರುವ ಜ್ಯೋತಿ ರೈ ನೀವು ನಿಮ್ಮ ಸುತ್ತ ಮುತ್ತ ಒಳ್ಳೇಯ ಪರಿಸರ ವಾತಾವರಣ ಹೊಂದಬೇಕು ಎಂದು ಬಯಸಿದ್ದೇ ಆದಲ್ಲಿ ಈ ತಂತ್ರವನ್ನು ಅನುಸರಿಸಿ ಎಂದಿದ್ದಾರೆ. ಯಾರು ನನ್ನ ಹೊಸದಾಗಿ ಹಿಂಬಾಲಿಸುತ್ತಿದ್ದೀರಾ ಅವರಿಗೆ ಸ್ವಾಗತ ಎಂದಿದ್ದಾರೆ.