ಕನ್ನಡಿಗರ ಸೂಪರ್ ಸ್ಟಾರ್ ದರ್ಶನ್ ಅರೆಸ್ಟ್; ಕೊ ಲೆ ಆರೋಪದಲ್ಲಿ ಅಂದರ್
ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಆರೋಪದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಈ ವಿಚಾರವನ್ನು ಪೊಲೀಸರು ಖಚಿತಪಡಿಸಿದ್ದಾರೆ. ಇದೀಗ ಈ ಕೊಲೆ ನಡೆದಿರುವುದು ಯಾಕೆ ಎಂಬ ಅಂಶ ಬಯಲಾಗಿದೆ. ಅದು ದರ್ಶನ್ ಗೆಳತಿ ಪವಿತ್ರಾ ಗೌಡ ವಿಚಾರದಲ್ಲಿ ಎಂಬುದು ಈಗ ಜಗಜ್ಜಾಹೀರಾಗಿದೆ.
ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ. ಫೋಟೊ ಕಳಿಸುವುದು ಈ ರೀತಿ ಮಾಡುತ್ತಿದ್ದನಂತೆ ಹೀಗಾಗಿ ರೇಣುಕಾಸ್ವಾಮಿಯನ್ನ ಒಂದು ವಾರದಿಂದ ಟ್ರಾಕ್ ಮಾಡಲಾಗಿತ್ತು.ಒಂದು ವಾರದಿಂದ ಟ್ರಾಕ್ ಮಾಡಿದ ನಂತರ ರೇಣುಕಾಸ್ವಾಮಿಯನ್ನ ಚಿತ್ರದುರ್ಗ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ, ರಾಘವೇಂದ್ರ ಕರೆದುಕೊಂಡು ಬಂದಿದ್ದನಂತೆ. ನಂತ್ರ ಆರ್ ಆರ್ ನಗರ , ವಾಹನ ಸೀಜರ್ ಮಾಡಿ ಇಡುವ ಶೆಡ್ ನಲ್ಲಿ ಇಟ್ಟು ರೇಣುಕಾಸ್ವಾಮಿಯನ್ನ ಹೊಡೆದಿದ್ದಾರೆ.
ಅದಾದ ನಂತರ ಶನಿವಾರ ನಡುರಾತ್ರಿ ಕಾಮಾಕ್ಷಿ ಪಾಳ್ಯದ ಸಲಾರ್ ಪುರ ಸತ್ವ ಬಳಿಯ ಮೋರಿಯಲ್ಲಿ ರೇಣುಕಾಸ್ವಾಮಿ ಮೃತದೇಹವನ್ನು ಎಸೆದು ಹೋಗಲಾಗಿದೆ. ದರ್ಶನ್ ರೇಣುಕಾಸ್ವಾಮಿ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದಿದ್ದಾರೆ ಎನ್ನಲಾಗುತ್ತಿದೆ.ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೊತೆಗೆ 10 ಜನರನ್ನು ಬಂಧಿಸಲಾಗಿದೆ. ಖ್ಯಾತ ಹೋಟೆಲ್ ಉದ್ಯಮಿ ವಿನಯ್ ಎಂಬಾತನನ್ನು ಕೂಡ ಬಂಧಿಲಾಗಿದೆ.
ಜೂ.8 ರ ರಾತ್ರಿ ವಿನಯ್ ಕಾರ್ ಶೆಡ್ ನಲ್ಲಿ ರೇಣುಕಾ ಸ್ವಾಮಿಯನ್ನು ಇಟ್ಟು ಹಲ್ಲೆ ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ ಆರೋಪಿಗಳು ಸುಮನಹಳ್ಳಿ ಬ್ರಿಡ್ಜ್ ಬಳಿ ಇರುವ ಸತ್ವ ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಎಸೆದಿದ್ದರು. ಬೆಳಗಿನ ಜಾವ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಮೃತದೇಹ ನೋಡಿ 112 ಕರೆ ಮಾಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದ. ಹಾಗಾಗಿ 10 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇದೀಗ ನಟ ದರ್ಶನ್ ಅವರನ್ನು ಕೂಡಾ ಲಾಕ್ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.