ಭೀಮ ಸಿನಿಮಾ ಶೂಟಿಂಗ್ ನಲ್ಲಿ ಪೊ.ಲೀಸರು ಅ ರೆಸ್ಟ್ ಮಾಡುವ ದೃಶ್ಯ ನೋಡಿ ಗಾಬರಿಗೊಂಡ ಕನ್ನಡಿಗರು

 | 
Nd

ಕನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಅರೆಸ್ಟ್  ಆಗಿದ್ದಾರೆ. ಬೆಂಗಳೂರಿನ ವಿನೋವಾ ನಗರದಲ್ಲಿ ನಡುರಸ್ತೆಯಲ್ಲೇ ಪೊಲೀಸರು ದುನಿಯಾ ವಿಜಯ್ ಕೈಗೆ ಬೇಡಿ ತೋಡಿಸಿಕೊಂಡು ಕರೆದುಕೊಂಡು ಹೋಗಿದ್ದಾರೆ. ಬೆಂಗಳೂರಿನ ವಿನೋವಾ ರಸ್ತೆಯಲ್ಲಿ ವಿಜಯ್ ಕಂಡು ಬಹುತೇಕರು ಗಾಬರಿಗೊಂಡಿದ್ದರು. 

ವಿಜಯ್ ಮೈ ತುಂಬಾ ರಕ್ತ ಬೇರೆ ಹರಿದಿದ್ದರಿಂದ ಏನಾಯಿತು ಎಂದೆಲ್ಲ ವಿಚಾರಿಸಿದ್ದರು. ಆಮೇಲೆ ಅದು ಶೂಟಿಂಗ್ ಸನ್ನಿವೇಶ ಎಂದು ಗೊತ್ತಾಗಿ ನಿಟ್ಟುಸಿರಿಟ್ಟರು. ಹೌದು, ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಭೀಮ  ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯವನ್ನು ವಿಜಯ್ ಶೂಟ್ ಮಾಡುತ್ತಿದ್ದಾರೆ. 

ನಡು ರಸ್ತೆಯಲ್ಲಿ ವಿಜಯ್ ಅವರನ್ನು ಅರೆಸ್ಟ್ ಮಾಡಿಕೊಂಡು ಹೋಗುವ ದೃಶ್ಯ ಅದಾಗಿದೆ. ಈ ಮೂಲಕ ಭೀಮ ಸಿನಿಮಾದ ಕ್ಲೈಮ್ಯಾಕ್ಸ್ ಏನಾಗಿರಲಿದೆ ಎನ್ನುವ ಸಣ್ಣದೊಂದು ಸುಳಿವೂ ಸಿಕ್ಕಿದೆ. ದುನಿಯಾ ವಿಜಯ್ ಈಗಾಗಲೇ ನಟ, ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದಾರೆ. ಭೀಮನಾಗಿ ಅಬ್ಬರಿಸಲು ಸಜ್ಜಾಗಿರುವ ಬೆನ್ನಲ್ಲೇ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. 

ಸಿನಿ ದುನಿಯಾಗೆ ಇಬ್ಬರು ಪುತ್ರಿಯರನ್ನು ವಿಜಯ್ ಪರಿಚಯಿಸುತ್ತಿದ್ದಾರೆ.ದುನಿಯಾ ವಿಜಯ್ ಅವರ ಇಬ್ಬರು ಹೆಣ್ಣು ಮಕ್ಕಳು ಸಿನಿಮಾರಂಗ ಪ್ರವೇಶಿಸೋದು ಖಚಿತ. ಇದನ್ನ ಸ್ವತಃ ವಿಜಯ್ ಅನೌನ್ಸ್ ಮಾಡಿದ್ದಾರೆ. ಆದರೆ ನೀವು ಗೆಸ್ ಮಾಡಿದಂತೆ ಕಿರಿ ಮಗಳು ಮೋನಿಷಾ ಅಲ್ಲ. ಬದಲಿಗೆ ಹಿರಿಯ ಮಗಳು ಮೋನಿಕಾ  ಮೊದಲು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.

ಮೋನಿಕಾ ವಿಜಯ್ ಅವರ ಎಜುಕೇಷನ್ ಕಂಪ್ಲೀಟ್ ಆಗಿದೆ. ರಿಸೆಂಟ್ ಆಗಿ ಮುಂಬೈನಲ್ಲಿ ಆ್ಯಕ್ಟಿಂಗ್ ಕೋರ್ಸ್ ಸಹ ಮುಗಿಸಿ ಬಂದಿದ್ದಾರೆ. ಮುಂಬೈನ ಅನುಪಮ್ ಖೇರ್  ನಟನಾ ಶಾಲೆಯಲ್ಲಿ ತರಬೇತಿ ಪಡೆದು ಬಂದಿರುವ ಮೋನಿಕಾ, ಸದ್ಯ ಬೆಂಗಳೂರಿನಲ್ಲಿ ಕಲಾತಂಡವೊಂದರ ಜೊತೆ ಕೆಲಸ ಮಾಡ್ತಿದ್ದಾರೆ. ಹಾಗಾಗಿ ಹಿರಿ ಮಗಳು ಮೋನಿಕಾ ಸಿನಿಮಾ ಎಂಟ್ರಿಗೆ ತಯಾರಾಗಿದ್ದು, ಶೀಘ್ರದಲ್ಲೇ ಸಿನಿಮಾ ಅನೌನ್ಸ್ ಆಗುವ ನಿರೀಕ್ಷೆಯಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ