ರೇವಣ್ಣ ಪತ್ನಿಯ ನಡವಳಿಕೆ ನೋಡಿ ಬೆಚ್ಚಿಬಿದ್ದ ಕನ್ನಡಿಗರು, ಆ ಸೂ. ಮಗನ್ನ ಎತ್ತುಕೊಂಡು ಬನ್ನಿ
Dec 4, 2023, 13:03 IST
|

ಅಧಿಕಾರ ಯಾರಿಗೆ ಕೊಡಬೇಕೋ ಅವರಿಗೇ ಮಾತ್ರ ಕೊಡಬೇಕು ಇಲ್ಲದಿದ್ದರೆ ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ ಆಗುತ್ತದೆ ಎನ್ನಲು ಇದು ಬೆಸ್ಟ್ ಉದಾಹರಣೆ ಹೌದು ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ ಭವಾನಿ ರೇವಣ್ಣ ಅವರು ಬೈಕ್ ಸವಾರನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ. ಭವಾನಿ ಅವರು ಕಾರಿನಿಂದ ಕೆಳಗಿಳಿದು ಬಂದು ಬೈಕ್ ಸವಾರ ಆರೋಗ್ಯ ವಿಚಾರಿಸಲಿಲ್ಲ. ಹಿಗ್ಗಾಮುಗ್ಗಾ ಬೈದದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ರು ಹಾಕ್ರೋ ಈ ಗಾಡಿನ ಎಂದು ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡರು. ವಾಹನದ ಮುಂಭಾಗ ಡ್ಯಾಮೇಜ್ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್ ಸವಾರನ ಮೊಬೈಲ್ ಕಸಿದುಕೊಂಡು ಬೈಕ್ ಕೀ ಕಿತ್ತುಕೊಂಡರು. ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು.
ಅಲ್ಲದೇ, ಬಿಟ್‌ಬಿಡಿ ಅಕ್ಕ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು? ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು.
ಇದು ಯಾವ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತೆ. ಗಾಡಿ ಸೀಜ್ ಮಾಡಿಸು. ಈ ಗ್ರಾಮ ಎಸ್‌ಐ ಬರೋಕೆ ಹೇಳಿ ಎಂದು ಭವಾನಿ ರೇವಣ್ಣ ಅವರೇ ಬೈಕ್ ಸವಾರ ಮತ್ತು ಹಿಂಬದಿ ಸವಾರನ ಫೋಟೋವನ್ನು ಕ್ಲಿಕ್ಕಿಸುತ್ತಿರುವ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬೈಕ್ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.