ಗಿಚ್ಚಿಗಿಲಿಗಿಲಿ ಖ್ಯಾತಿಯ ಕಾತಿ೯ಕ್ ಅಲಿಯಾಸ್ ಹುಲಿ ಕಾತಿ೯ಕ್ ಅಂದರ್? ಕನ್ನಡಿಗರು ಶಾ ಕ್
Oct 11, 2024, 18:01 IST
|

ಹುಲಿ ಕಾರ್ತಿಕ್.. ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ ಮೂಲಕ ಮನೆ ಮಾತಾದ ನಟ. ಸ್ಟೇಜ್ ಮೇಲೆ ಪಂಚಿಂಗ್ ಡೈಲಾಗ್ಗಳ ಹೊಡೀತಾ ಜನರನ್ನ ನಗೆಗಡಲಲ್ಲಿ ತೇಲಿಸೋ ನಟ. ಎಲ್ಲದಕ್ಕಿಂತ ಹೆಚ್ಚಾಗಿ ಗಿಚ್ಚಿ ಗಿಲಿ ಗಿಲಿ ಸೀಸನ್-3 ರಿಯಾಲಿಟಿ ಶೋ ವಿಜೇತ ಕೂಡ. ಆದ್ರೀಗ ಹುಲಿ ಕಾರ್ತಿಕ್ ಮಾಡಿದ ಅದೊಂದು ಎಡವಟ್ಟು ಕಾನೂನು ಸಂಕಷ್ಟ ತಂದೊಡ್ಡಿದೆ.
ಹಾಸ್ಯ ನಟ ಹುಲಿ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್ನ ವಿನ್ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಾಗಿತ್ತು. ಇತ್ತೀಚೆಗಷ್ಟೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಕೂಡ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಬಿಗ್ಬಾಸ್ಗೂ ಕಾರ್ತಿಕ್ ಎಂಟ್ರಿ ಕೊಡ್ತಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈಗ ಕಾರ್ತಿಕ್ ಮಾತನಾಡುವಾಗ ಎಡವಟ್ಟು ಮಾಡಿಕೊಂಡಿದ್ದು, ಇದೇ ಕಾರಣಕ್ಕೆ ಎಫ್‌ಐಆರ್ ದಾಖಲಾಗಿದೆ.
ಇನ್ನು ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ 2024ರ ಕಾರ್ಯಕ್ರಮದಲ್ಲಿ ಕಾಮಿಡಿ ಸ್ಕಿಟ್‌ನಲ್ಲಿ ತುಕಾಲಿ ಸಂತೋಷ್‌ಗೆ ಬೈಯುವಾಗ ನೀನು ಗುಂಡ ಆಲ್ಲ, ರೋಡಲ್ಲಿ ಬಿದ್ದಿರೋ ಹೊಂಡ ವಡ್ಡ ಅಲ್ಲ ಇದ್ದಂಗೆ ಇದ್ದೀಯಾ ಎಂದು ಹೇಳಿದ್ದಾಗಿ ಹಾಸ್ಯನಟ ಹುಲಿ ಕಾರ್ತಿಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಮತ್ತೊಮ್ಮೆ ಬೇಕಿದ್ದರೆ ಕೇಳಿಸಿಕೊಳ್ಳಿ ಆದರೆ ಸುಮ್ಮನೆ ಆರೋಪ ಹೊರಿಸದಿರುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಹುಲಿ ಕಾರ್ತಿಕ್ ವಿರುದ್ಧ ಜಾತಿ ನಿಂದನೆ ಆರೋಪದಡಿ ಎಫ್‌ಐಆರ್ ದಾಖಲಾದ ಬೆನ್ನಲ್ಲಿಯೇ ಸ್ಪಷ್ಟೀಕರಣ ನೀಡುವುದಕ್ಕೆ ಒಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಅದರಲ್ಲಿ ನಾವು ಎಲ್ಲ ಸಮುದಾಯವನ್ನು ನಗಿಸುವ ಕೆಲಸ ಮಾಡುತ್ತೇವೆ. ಯಾವುದೇ ಸಮುದಾಯವನ್ನು ನೋವಾಗುವ ರೀತಿಯಲ್ಲಿ ಮಾತನಾಡಿಲ್ಲ. ಯಾವುದೇ ಜಾತಿ, ಧರ್ಮದ ಬಗ್ಗೆ ಹಾಸ್ಯ ಮಾಡುವುದಕ್ಕೆ ಖಾಸಗಿ ವಾಹಿನಿಯಲ್ಲಿ ಅವಕಾಶ ಇರುವುದಿಲ್ಲ. ಸೂಕ್ತವಾಗಿ ವ್ಯವಸ್ಥೆ ಇದ್ದು ಅದರಂತೆ ಸ್ಕ್ರಿಪ್ಟ್ ತಯಾರಾಗುತ್ತದೆ ಎಂದು ಹೇಳಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.