ಕುಚಿಕು ಗೆಳೆಯ ಅಂತ ನೋಡದೆ ರೇಣುಕಾಸ್ವಾಮಿ ಪರ ನಿಂತ ಕಿಚ್ಚ ಸುದೀಪ್
ದರ್ಶನ್ ಪ್ರಕರಣ ದಾಖಲಾಗಿ ಒಂದುವಾರದ ನಂತರ ನಟ ಸುದೀಪ್ ಮಾತನಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ಮತ್ತೊಂದು ದೊಡ್ಡ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಮೃತ ರೇಣುಕಾಸ್ವಾಮಿ ಮತ್ತು ಆತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.
ಈ ತರದ ಯಾವುದೇ ಘಟನೆ ಆದರೂ ಇಡೀ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಮೊದಲೇ ಜನ ಸಿನಿಮಾ ನೋಡಲು ಬರುತ್ತಿಲ್ಲ, ನಾವು ಒಳ್ಳೆ ಸಿನಿಮಾ ಮಾಡಿ ಪ್ರಯತ್ನ ಪಟ್ಟರೆ ಮಾತ್ರ ಚಿತ್ರರಂಗ ಬೆಳೆಯುತ್ತದೆ ಎಂದು ಹೇಳಿದರು.ಮಾಧ್ಯಮಗಳಲ್ಲಿ ಏನು ಬರುತ್ತಿದಿಯೋ ಅಷ್ಟೇ ನನಗೂ ಗೊತ್ತಿರುವುದು. ಸತ್ಯವನ್ನು ಹೊರತರಲು ಮಾಧ್ಯಮಗಳು, ಪೊಲಿಸರು ಪ್ರಯತ್ನ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಈ ಪ್ರಕರಣದಲ್ಲಿ ಸತ್ಯ ಹೊರತರಲು ಹಠ ಹಿಡಿದಿದ್ದಾರೆ ಎಂದು ಮಾಧ್ಯಮಗಳು ಹೇಳಿವೆ. ಸಾಮಾನ್ಯ ಮನುಷ್ಯನಾಗಿ ನಾನು ಯಾರ ಪರ, ವಿರುದ್ಧವೂ ಅಲ್ಲ, ಆದರೆ ಬಾಳಿ ಬದುಕಬೇಕಾದ ಹುಡುಗ ಸತ್ತಿದ್ದಾನಲ್ಲ ಆತನಿಗೆ ನ್ಯಾಯ ಸಿಗಬೇಕು, ಆತನ ಕುಟುಂಬಕ್ಕೆ, ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು ಎಂದರು.
ಎಲ್ಲರಿಗೂ ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಬರಬೇಕು ಎಂದರೆ ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು. ಚಿತ್ರರಂಗಕ್ಕೆ ಇಂದು ನ್ಯಾಯ ಸಿಗಬೇಕು, ಚಿಕ್ಕ ಚಿಕ್ಕ ವಿಚಾರಗಳಿಗೂ ಚಿತ್ರರಂಗವನ್ನು ದೂಷಿಸಲಾಗುತ್ತಿದೆ. ಒಬ್ಬಿಬ್ಬರಿಂದ ಚಿತ್ರರಂಗ ಅಲ್ಲ, ಆ ಕುಟುಂಬಕ್ಕೆ ನ್ಯಾಯ ಸಿಕ್ಕಾಗ ಚಿತ್ರರಂಗಕ್ಕೂ ಖುಷಿಯಾಗುತ್ತದೆ ಎಂದು ಹೇಳಿ ಸ್ನೇಹ ಬೇರೆ, ನ್ಯಾಯ ಬೇರೆ, ಸಾವಿರಾರು ಜನ ಕಷ್ಟಪಟ್ಟು ದುಡಿದ ಕಾರಣ ಇಂದು ಚಿತ್ರರಂಗ ಇದೆ. ಆರೋಪಿ, ಅಪರಾಧಿ ಯಾರು ಎಂದು ಹೇಳಲು ಜಡ್ಜ್ ಇದ್ದಾರೆ, ನಾವು ಅದನ್ನು ತೀರ್ಮಾನಿಸಲು ಆಗಲ್ಲ ಎಂದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.