ಸಮಾಜದಲ್ಲಿ ಹೋರಾಟ ಮಾಡುತ್ತಿದ್ದ ಲಾಯರ್ ಜಗದೀಶ್ ಶ ವವಾಗಿ ಪತ್ತೆ

 | 
Bs
ಬನ್ನೇರುಘಟ್ಟ-ಕನಕಪುರ ಮಾರ್ಗದ ನೈಸ್​ ರಸ್ತೆಯಲ್ಲಿ ವಕೀಲ ಜಗದೀಶ್​ ಅವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿರುವ ಕೆಂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಮಂಡ್ಯ ಜಿಲ್ಲೆಯ ಮಳವಳ್ಳಿಯ ಜಗದೀಶ್ ನಗರದ ಉಲ್ಲಾಳದಲ್ಲಿ ವಾಸವಿದ್ದರು. ಮೇ 2ರಂದು ಸಂಜೆ 7.30 ರಿಂದ 8 ಗಂಟೆ ಸುಮಾರಿಗೆ ನೈಸ್​ ರಸ್ತೆಯಲ್ಲಿ ಅವರ ಕಾರು ಪತ್ತೆಯಾಗಿದ್ದು, ಕಾರು ನಿಲ್ಲಿಸಿದ ಜಾಗದಿಂದ 100 ಮೀಟರ್ ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಾರಿನ ಒಂದೆರಡು ಕಡೆಗಳಲ್ಲಿ ಸಣ್ಣ ಪ್ರಮಾಣದ ಅಪಘಾತವಾದ ಗುರುತುಗಳಿವೆ.
ಶನಿವಾರ ರಾತ್ರಿ ವಕೀಲ ಜಗದೀಶ್ ಅವರ ದೇಹ ರಕ್ತಸಿಕ್ತವಾಗಿ ನೈಸ್ ರಸ್ತೆಯಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ಮೃತ ಜಗದೀಶ್ ಸೋದರ ಸಂಬಂಧಿಯೊಬ್ಬರು ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಸಾವಿಗೆ ರಹಸ್ಯವನ್ನು ಬಯಲಿಗೆಳೆದಿದ್ದಾರೆ.
ವಕೀಲ್ ಜಗದೀಶ್ ನೈಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಅವರ ಕಾರಿಗೆ ಲಾರಿಯೊಂದು ಟಚ್ ಆಗಿದೆ. ಟಚ್ ಆಗುತ್ತಿದ್ದಂತೆ ಚಾಲಕ ಸ್ವಲ್ಪ ಮುಂದೆ ಹೋಗಿ ಲಾರಿ ನಿಲ್ಲಿಸಿದ್ದ. ಆಗ ಜಗದೀಶ್ ಕಾರು ನಿಲ್ಲಿಸಿ ಲಾರಿ ಚಾಲಕನ ಬಳಿಗೆ ಹೋಗಿದ್ದಾರೆ. ಈ ವೇಳೆ ಅವರಿಬ್ಬರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದದ ಭರದಲ್ಲಿ ಜಗದೀಶ್ ಅರಿವಿಲ್ಲದೇ ನಡುರಸ್ತೆಗೆ ಹೋಗಿದ್ದಾರೆ. ಇದೇ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯ ಹಿಂಬದಿಯ ಭಾಗ ಜಗದೀಶ್‌ಗೆ ಟಚ್ ಆಗಿದೆ. ಇದರಿಂದ ತಕ್ಷಣ ಕೆಳಗೆ ಬಿದ್ದು, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕನಿಗೆ ಹಿಂಬದಿಗೆ ಏನೋ ತಾಗಿದೆ ಎಂದು ಅನಿಸಿದಾಗ, ಸುಮಾರು ಅರ್ಧ ಕಿ.ಮೀ ಮುಂದೆ ಹೋಗಿ ಲಾರಿ ನಿಲ್ಲಿಸಿದ್ದ. ಆದರೆ ಯಾರು ಲಾರಿಯ ಹಿಂದೆ ಬರದ ಕಾರಣ ಏನು ಆಗಿಲ್ಲ ಎಂದು ಹಾಗೆಯೇ ತೆರಳುತ್ತಾನೆ ಎಂದು ತನಿಖೆ ವೇಳೆ ಮಾಹಿತಿ ಲಭ್ಯವಾಗಿದೆ.ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೆಂಗೇರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದಾರೆ. ಇನ್ನೂ ಮೃತ ಜಗದೀಶ್ ಅವರ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾ‌ಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.