ಯಾರ ಬಳಿಯೂ ಮಾತನಾಡದ ಲೀಲಾವತಿ ಅಮ್ಮ, ಡಿಕೆಶಿ ಬಂದ ತಕ್ಷಣ ಕೈಕೊಟ್ಟು ಏನು ಹೇಳಿದ್ದಾರೆ ಗೊ.ತ್ತಾ

 | 
Js

ಒಂದು ಕಾಲದಲ್ಲಿ ಲೀಲಾವತಿ ಅವರು ಬಹುಬೇಡಿಕೆಯ ನಟಿಯಾಗಿದ್ದರು. ನಾಯಕಿಯಾಗಿ ಮಿಂಚಿದ್ದ ಅವರು ನಂತರದಲ್ಲಿ ಪೋಷಕ ಪಾತ್ರಗಳನ್ನು ಒಪ್ಪಿಕೊಂಡರು. ಅಂದಾಜು 650 ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಪ್ರಮುಖ ಕಲಾವಿದರ ಜೊತೆ ಅವರು ತೆರೆಹಂಚಿಕೊಂಡಿದ್ದಾರೆ.

ನಟನೆ ಮಾತ್ರವಲ್ಲದೇ ಕೃಷಿಯಲ್ಲೂ ಅವರಿಗೆ ಅಪಾರ ಆಸಕ್ತಿ ಇತ್ತು. ಕಳೆದ ಅನೇಕ ವರ್ಷಗಳಿಂದ ಸೋಲದೇವನಹಳ್ಳಿಯಲ್ಲಿ ಅವರು ಕೃಷಿ ಮಾಡುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ. ಹಾಗಾಗಿ ಈದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯದ ಬಗ್ಗೆ ಡಿಕೆಶಿ ವಿಚಾರಿಸಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ಪಶು ಆಸ್ಪತ್ರೆ ನಿರ್ಮಿಸಿದ್ದಾರೆ. ನಿನ್ನೆ ನವೆಂಬರ್​ 28ರಂದು ಅದರ ಉದ್ಘಾಟನೆ ಮಾಡುವ ಸಲುವಾಗಿ ಆಗಮಿಸಿರುವ ಡಿ.ಕೆ. ಶಿವಕುಮಾರ್​ ಅವರು ಹಿರಿಯ ಕಲಾವಿದೆಯ ಮನೆಗೆ ಭೇಡಿ ಕೊಟ್ಟಿದ್ದಾರೆ. ಈ ವೇಳೆ  ಲೀಲಾವತಿ ಅವರ ಪುತ್ರ ವಿನೋದ್​ ರಾಜ್​ ಜೊತೆ ಡಿಕೆಶಿ ಮಾತನಾಡಿದ್ದಾರೆ. ಲೀಲಾವತಿ ಅವರಿಗೆ ಈಗ 86 ವರ್ಷ ವಯಸ್ಸು. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ.

ಲೀಲಾವತಿ ಅವರಿಗೆ ಪ್ರಾಣಿಗಳ ಬಗ್ಗೆ ವಿಶೇಷವಾದ ಪ್ರೀತಿ. ಎಲ್ಲ ಬಗೆಯ ಪ್ರಾಣಿಗಳಿಗೂ ಅವರು ಕರುಣೆ ತೋರಿಸುತ್ತಾರೆ. ಅದೇ ಕಾರಣಕ್ಕಾಗಿ ತಮ್ಮ ಸ್ವಂತ ದುಡ್ಡಿನಲ್ಲಿ ಪಶು ಆಸ್ಪತ್ರೆ ನಿರ್ಮಿಸಿದ್ದಾರೆ. ಅದಕ್ಕಾಗಿ ಅಂದಾಜು 45 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಸೋಲದೇವನಹಳ್ಳಿಯ ಅಕ್ಕಪಕ್ಕದ ಎಲ್ಲ ಗ್ರಾಮಗಳಿಗೆ ಅನುಕೂಲ ಆಗಲಿ ಎಂಬ ಕಾರಣದಿಂದ ಈ ಆಸ್ಪತ್ರೆ ಕಟ್ಟಲಾಗಿದೆ. ಅದೇ ರೀತಿ ಜನರಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಅವರು ಕಟ್ಟಿದ್ದಾರೆ. ಅವರ ಈ ಸಮಾಜಮುಖಿ ಕಾರ್ಯಕ್ಕೆ  ಡಿಕೆ ಶಿವಕುಮಾರ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.