ಬಡವರ ಪಾಲಿಗೆ ಬಂಗಾರವಾದ ಮೋದಿ, ಪ್ರತಿ ತಿಂಗಳು 6000 ನಿಮ್ಮ ಖಾತೆಗೆ

 | 
Bd

ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಜಾರಿಗೆ ತಂದಿದೆ. ಇ-ಶ್ರಮ ಕಾರ್ಡ್ ಮೂಲಕ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ನೀಡಲಾಗುತ್ತಿದ್ದು, ಇ-ಶ್ರಮ ಕಾರ್ಡ್ ಎಂಬುದು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವಾಗಿದೆ. 

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಯೋಜನೆ ಅಸಂಘಟಿತ ವಲಯದ ಕಾರ್ಮಿಕರ ಶ್ರೇಯೋಭಿವೃದ್ಧಿ ಮೂಲ ಉದ್ದೇಶ ಹೊಂದಿದೆ. ಇ-ಶ್ರಮ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಭಾರತ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆಯಾಗಿದೆ. ಇದು ಗಂಡ ಹೆಂಡತಿ ಇಬ್ಬರಿಗೂ 6000 ಹಣ ಸರ್ಕಾರದಿಂದ ನೀಡುತ್ತದೆ. ಇದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ವಿಶಿಷ್ಟ 12-ಅಂಕಿಯ ಗುರುತಿನ ಸಂಖ್ಯೆಯಾಗಿದೆ. ಇ-ಶ್ರಮ ಕಾರ್ಡ್ ಹೆಸರು, ವಯಸ್ಸು, ಲಿಂಗ, ಉದ್ಯೋಗ ಮತ್ತು ಕೆಲಸಗಾರನ ಕುರಿತು ಇತರ ಸಂಬಂಧಿತ ಮಾಹಿತಿಯಂತಹ ವಿವರಗಳನ್ನು ಒಳಗೊಂಡಿದೆ. 

ಇ-ಶ್ರಮ ಕಾರ್ಡ್ ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿದ್ದು ಅದು ಭಾರತದಲ್ಲಿನ ಅಸಂಘಟಿತ ಕಾರ್ಮಿಕರ ಸಮಗ್ರ ಡೇಟಾಬೇಸನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಆಧಾರ್ ಸಂಖ್ಯೆಗೆ ಜೋಡಣೆಯಾದ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ದಪಡಿಸಲು, ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯ ಇ-ಶ್ರಮ ಪೋರ್ಟಲ್ ಅನ್ನು (www.eshram.gov.in) ಅಭಿವೃದ್ಧಿಪಡಿಸಿದೆ. ಇದು ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ವಿವರ ಇತ್ಯಾದಿ ವಿವರ ಒಳಗೊಂಡಿರುತ್ತದೆ.

ಈ ಮೂಲಕ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕಲ್ಪಿಸಲಾಗುತ್ತದೆ. ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಪೋರ್ಟಬಲ್ ಆಗಿದೆ. ಅಂದರೆ ಕಾರ್ಮಿಕರು ದೇಶಾದ್ಯಂತ ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಪಡೆಯಬಹುದು. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.

ಅತಿ ಹೆಚ್ಚು ಇ-ಶ್ರಮ ಕಾರ್ಡ್ ನೋಂದಣಿಯಲ್ಲಿ ರಾಜ್ಯ 13ನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಮೊದಲ ಸ್ಥಾನ ತಮಿಳುನಾಡು ಇದ್ದರೆ, ಆಂಧ್ರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಅತಿ ಹೆಚ್ಚು ನೋಂದಣಿಯಲ್ಲಿ ದೇಶದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಬಿಹಾರ ಎರಡನೇ ಸ್ಥಾನ, ಪಶ್ಚಿಮ ಬಂಗಾಳ ಮೂರನೇ ಸ್ಥಾನ, ಮಧ್ಯಪ್ರದೇಶ ನಾಲ್ಕನೇ ಸ್ಥಾನ ಹಾಗೂ ಮಹಾರಾಷ್ಟ್ರಾ ಐದನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಆಗಸ್ಟ್ 24, 2021ರಿಂದ ನೋಂದಣಿ ಆರಂಭವಾಗಿದ್ದು, ಮಾರ್ಚ್ 31, 2022 ವರೆಗೆ ಒಟ್ಟು 60,28,900 ಅಸಂಘಟಿತ ಕಾರ್ಮಿಕರು ಇ-ಶ್ರಮ ಕಾರ್ಡ್ ಗೆ ನೋಂದಾಯಿಸಿಕೊಂಡಿದ್ದರು. 

ಅಂದರೆ ಆರಂಭದಲ್ಲಿ ಅತಿ ಹೆಚ್ಚು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. ಆದರೆ , ಬಳಿಕದ ವರ್ಷಗಳಲ್ಲಿ ನೋಂದಣಿ ಮಾಡುವವರ ಪ್ರಮಾಣ ಇಳಿಕೆಯಾಯಿತು. 2022-2023 ಆರ್ಥಿಕ ವರ್ಷದಲ್ಲಿ 15,05,801 ಕಾರ್ಮಿಕರು ಇ-ಶ್ರಮ ಕಾರ್ಡ್ ಗೆ ನೋಂದಾವಣೆ ಮಾಡಿಕೊಂಡಿದ್ದರು. ಅದೇ 2023-2024 ಸಾಲಿನಲ್ಲಿ ಅಕ್ಟೋಬರ್ 14ರ ವೆರೆಗೆ 2,11,534 ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ ಎಂದು ಕಾರ್ಮಿಕ ಇಲಾಖೆ ತಿಳಿಸಿದ್ದು ನೀವು ಕೂಡ ಆದಷ್ಟು ಬೇಗ ಮಾಡಿಸಿಕೊಳ್ಳಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarundu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.