ಸಮೀರ್ ವಿಡಿಯೋಗೆ ಮುಸ್ಲಿಂ ಮಹಿಳೆಯಿಂದ ಬಹಿರಂಗವಾಗಿ ಖಡಕ್ ವಾ ರ್ನಿಂಗ್
Mar 7, 2025, 18:40 IST
|

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸಂಚಲನ ಮೂಡಿಸಿರುವ ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಶಕಗಳಿಗೂ ಹಿಂದಿನ ಪ್ರಕರಣವಾಗಿರುವ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರ ಈಚೆಗೆ ಚರ್ಚೆಯ ಮುನ್ನೆಲೆಗೆ ಬಂದಿದ್ದು.
ಸೌಜನ್ಯ ಅವರ ರೇಪ್ ಅಂಡ್ ಮರ್ಡರ್ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಎನ್ನುವವರು ಸುದೀರ್ಘ ವಿಡಿಯೋವೊಂದನ್ನು ಮಾಡಿದ್ದರು. ಇದೀಗ ಸಮೀರ್ ಅವರ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ಇದೀಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಇದೀಗ ಈ ವಿಷಯ ಭಾರೀ ಚರ್ಚೆಗೆ ಕಾರಣವಾಗಿದೆ.
ಸಮೀರ್ ಅವರ ವಿಡಿಯೋವನ್ನು ಒಂದು ಕೋಟಿಗೂ ಹೆಚ್ಚು ಜನ ನೋಡಿದ್ದು. ಇದೀಗ ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ, ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆ ಆಗುವ ರೀತಿಯಲ್ಲಿ ವಿಡಿಯೋ ಮಾಡಿರುವ ಆರೋಪ ಕೇಳಿ ಬಂದಿದ್ದು. ಈ ಅಂಶಗಳನ್ನು ಸಮೀರ್ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿತ್ತು. ಆದರೆ ಈದೀಗ ಹೈಕೋರ್ಟ್ ಅವರ ಮೇಲೆ ಯಾವುದೇ ಕಾರಣಕ್ಕೂ ಕ್ರಮ ಜರುಗಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಇವೆಲ್ಲವುಗಳ ನಡುವೆ ಮುಸ್ಲಿಂ ಮಹಿಳೆಯೊಬ್ಬರು ದೇವಸ್ಥಾನಾಕ್ಕಾಗಲಿ, ಸಮೀರ್ ಗಾಗಲಿ ಬೈಬೇಡಿ . ಅದು ಎಲ್ಲರ ಭಕ್ತಿಯ ಪರಾಕಾಷ್ಠೆ ತುಂಬಿರುವ ದೇಗುಲ. ಅಲ್ಲಿ ಎಲ್ಲಾ ಜಾತಿ ಧರ್ಮದವರು ಬರ್ತಾರೆ. ಆಶೀರ್ವಾದ ಪಡೆದು ಹೋಗ್ತಾರೆ ಎಂದೆಲ್ಲ ಹೇಳಿದ್ದಾಳೆ.ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದರು. ಅದಕ್ಕೆ ಈ ಮಹಿಳೆ ಇಂತಹ ಕೆಲಸ ಮಾಡ್ಬೇಡಿ ಎಂದು ಬೇಡಿಕೊಂಡಿದ್ದಾಳೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.