ನನ್ನ ಹಳೆ ಲವರ್ ಕೂಡ ನನ್ನ ಮದುವೆಗೆ ಬರ್ತಾಳೆ, ಭಾವಿ ಪತ್ನಿ ಮುಂದೆ ಧನಂಜಯ್ ನೇರ ಮಾತು
Feb 10, 2025, 17:43 IST
|

ನಟ ರಾಕ್ಷಸ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದು, ಕರೆಯೊಲೆ ಹಂಚುತ್ತಿದ್ದಾರೆ. ಭಾವಿ ಪತ್ನಿ ಧನ್ಯತಾ ಜೊತೆಯಲ್ಲಿಯೇ ತೆರಳಿ ಆಪ್ತರಿಗೆ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಮದುವೆಗೆ ಆಹ್ವಾನಿಸುತ್ತಿದ್ದಾರೆ. ಇಂದು ಮೈಸೂರಿನ ಚಾಮುಂಡಿ ದೇಗುಲಕ್ಕೆ ಭೇಟಿ ನೀಡಿರುವ ಧನಂಜಯ್ ಮತ್ತು ಧನ್ಯತಾ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಪ್ರಧಾನಿಗಳಾದ ಹೆಚ್‌ಡಿ ದೇವೇಗೌಡರನ್ನ ಭೇಟಿಯಾಗಿ ಧನಂಜಯ್-ಧನ್ಯತಾ ಆಶೀರ್ವಾದ ಪಡೆದುಕೊಂಡು ಮೈಸೂರಿನಲ್ಲಿ ನಡೆಯುವ ಮದುವೆಗೆ ಆಹ್ವಾನಿಸಿದ್ದರು.
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಹಿರಿಯ ನಟ ಶಿವರಾಜ್‌ಕುಮಾರ್ ಸೇರಿದಂತೆ ಹಲವು ಗಣ್ಯರ ನಿವಾಸಕ್ಕೆ ಧನಂಜಯ್ ಮತ್ತು ಧನ್ಯತಾ ಜೊತೆಯಾಗಿ ತೆರಳಿ ಮದುವೆ ಆಹ್ವಾನಿಸುತ್ತಿದ್ದಾರೆ.
ಧನಂಜಯ್ ಮತ್ತು ಧನ್ಯತಾ ಮದುವೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿರುವ ವಸ್ತು ಪ್ರದರ್ಶನ ಮೈದಾನದಲ್ಲಿ 2025 ಫೆಬ್ರವರಿ 15 ಮತ್ತು 16ರಂದು ನಡೆಯಲಿದೆ. ನೆಚ್ಚಿನ ನಟನ ಮದುವೆಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಚಂದವಾಗಿ ಧನ್ಯತಾ ಅವರಿಗೆ ಸಂದರ್ಶನದಲ್ಲಿ ಪ್ರಪೋಸ್ ಮಾಡಿದ್ದಾರೆ ಡಾಲಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.