ಕುಂಭವೇಳಕ್ಕೆ ನುಗ್ಗಿದ ಮುಸ್ಲಿಂ ಮಹಿಳೆಯ ಚಳಿಬಿಡಿಸಿದ ನಾಗ ಸಾಧುಗಳು
Feb 2, 2025, 17:07 IST
|

ಮಹಾ ಕುಂಭಮೇಳದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಹಾಕುಂಭದಲ್ಲಿ ಸ್ನಾನ ಮಾಡಲು ದೇಶ ಮಾತ್ರವಲ್ಲದೆ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಗುರುವಾರ 10 ದೇಶಗಳ 21 ಜನಪ್ರತಿನಿಧಿಗಳ ನಿಯೋಗ ಮಹಾ ಕುಂಭಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದೆ. ಅಘೋರಿಗಳು, ಸನ್ಯಾಸಿಗಳು, ನಾಗ ಸಾಧುಗಳು, ಸಾಮಾನ್ಯ ಜನರು ಹೀಗೆ ಹಲವಾರು ಕೋಟಿ ಜನರಿಂದ ಕುಂಭಮೇಳ ಮತ್ತಷ್ಟು ಆಕರ್ಷಕವಾಗಿ ಹೊರಹೊಮ್ಮಿದೆ.
ವಿದೇಶದ ಮುಸ್ಲಿಂ ಮಹಿಳೆಯೊಬ್ಬರು ಭಾರತದ ಪ್ರಸಿದ್ಧ ಮಹಾಕುಂಭದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ ಅಬುಧಾಬಿಯ ಮುಸ್ಲಿಂ ಮಹಿಳೆ ಸ್ಯಾಲಿ ಎಲ್ ಅಜಾಬ್ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಭಾಗವಹಿಸಿ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಜೊತೆಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರವನ್ನು ಹೊಗಳಿದ್ದಾರೆ.
ಇದಲ್ಲದೆ ಈ ವಿದೇಶಿ ಜನಪ್ರತಿನಿಧಿಗಳ ಗುಂಪು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ, ಮಹಾ ಕುಂಭಮೇಳದ ಧಾರ್ಮಿಕ ಮಹತ್ವವನ್ನು ಅರ್ಥಮಾಡಿಕೊಂಡಿದ್ದು ಮಾತ್ರವಲ್ಲದೆ ಭಾರತೀಯ ಸಂಸ್ಕೃತಿಯ ಅಸಾಧಾರಣ ಅಂಶಗಳನ್ನು ಅನುಭವಿಸಿದ್ದಾರೆ. ಅಲ್ಲದೆ ವಿಶ್ವದ ಅತಿದೊಡ್ಡ ಧಾರ್ಮಿಕ ಮಹಾ ಕುಂಭ ಮೇಳಕ್ಕಾಗಿ ಮಾಡಿದ ವ್ಯವಸ್ಥೆಗಳಿಗಾಗಿ ಅಂತರರಾಷ್ಟ್ರೀಯ ಸಂದರ್ಶಕರು ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದ್ದಾರೆ.
ಮಹಾ ಕುಂಭಕ್ಕೆ ಬಂದಿದ್ದ 21 ಸದಸ್ಯರ ವಿದೇಶಿ ನಿಯೋಗದ ಏಕೈಕ ಮುಸ್ಲಿಂ ಮಹಿಳಾ ಸದಸ್ಯೆ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಸ್ಯಾಲಿ ಎಲ್ ಅಜಾಬ್ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ ನಂತರ ಸಾಕಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ನಾನು ಮಧ್ಯಪ್ರಾಚ್ಯದಿಂದ ಭಾರತಕ್ಕೆ ಬಂದಿದ್ದೇನೆ. ಇದೊಂದು ಅದ್ಭುತವಾದ ಘಟನೆ. ಇದು ಜಗತ್ತಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ.
ಇಲ್ಲಿ ಎಲ್ಲವೂ ಚೆನ್ನಾಗಿ ಸಂಘಟಿತವಾಗಿದೆ. ಯುಪಿ ಸರ್ಕಾರ ರಕ್ಷಣೆಗಾಗಿ ಪೊಲೀಸ್ ವ್ಯವಸ್ಥೆಗಳನ್ನು ಮಾಡಿದೆ. 144 ವರ್ಷಗಳ ನಂತರ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಆಯೋಜಿಸಲಾಗುತ್ತಿದೆ. ಇಲ್ಲಿನ ವ್ಯವಸ್ಥೆ ಕಂಡು ನನಗೆ ತುಂಬಾ ಖುಷಿಯಾಗಿದೆ ಎಂದು ಸ್ಯಾಲಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.