ಮಂಗಳೂರಿಗೆ ಮೋದಿ ಬಂದಾಗ ಉದಯ್ ಪೂಜಾರಿಗೆ ಆಹ್ವಾನ ನೀಡದ ನೂತನ MP ಅಭ್ಯರ್ಥಿ ಬ್ರಿಜೇಶ್ ಔಟ;
ಬಿಜೆಪಿಯಲ್ಲಿ ಬಣ ರಾಜಕಾರಣವಿದೆ ಅದು ಉಳಿದ ಜಾತಿ ನಾಯಕರನ್ನು ಬೆಳೆಯಲು ಅವಕಾಶ ನೀಡಿವುದಿಲ್ಲ. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು.
ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು. ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ಬಿಲ್ಲವ ಸಮುದಾಯದ ಕಡೆಗಣನೆ ಆರಂಭವಾಗಿದೆ ಎಂದಿದ್ದಾರೆ.
ಅಷ್ಟಕ್ಕೂ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಕಿಡಿ ಕಾರಿದ್ದಾರೆ.
ಇಲ್ಲಿ ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು.
ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.