ದರ್ಶನ್ ಮುಂದೆ ಎದ್ದು ಬಿದ್ದು ಕುಣಿಸಿದ ನಿಶ್ವಿಕಾ ನಾಯ್ಡು, ಮನಸೋತು ದಾಸ

 | 
Vggu

ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಇದೀಗ ಹೊಡಿರೆಲೆ ಹಲಗಿ ಹಾಡಿನ ಮೂಲಕ ಸುದ್ದಿಯಲ್ಲಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಗರಡಿ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ. ಆ ಹಾಡಿನಲ್ಲಿ ಕೊಂಚ ಗ್ಲಾಮರಸ್ ಅವತಾರದಲ್ಲಿಯೇ ಸೊಂಟ ಬಳುಕಿಸಿದ್ದಾರೆ ನಿಶ್ವಿಕಾ.
ಹೌದು ದರ್ಶನ್ ವಿಶೇಷ ಪಾತ್ರದಲ್ಲಿ ನಟಿಸಿರುವ ಗರಡಿ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. 

ರಾಣೆಬೆನ್ನೂರಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಟ ದರ್ಶನ್ ಟ್ರೈಲರ್ ಲಾಂಚ್ ಮಾಡಿದ್ದಾರೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಗರಡಿ ಗತ್ತು ಪ್ರದರ್ಶನವಾಯಿತು. ಯಶಸ್ ಸೂರ್ಯ ಹೀರೊ ಆಗಿ ನಟಿಸಿರುವ ಗರಡಿ ಸಿನಿಮಾ ಮುಂದಿನ ವಾರ ತೆರೆಗೆ ಬರಲಿದೆ. ಬಿ. ಸಿ ಪಾಟೀಲ್ ಸಿನಿಮಾ ನಿರ್ಮಿಸಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. 

ಸೋನಲ್ ಮಂಥೆರೊ ನಾಯಕಿಯಾಗಿ ಮಿಂಚಿದ್ದಾರೆ. ಚಿತ್ರದಲ್ಲಿ ನಾಯಕ ಸೂರಿಯ ಅಣ್ಣನ ಪಾತ್ರದಲ್ಲಿ ದರ್ಶನ್ ನಟಿಸಿದ್ದಾರೆ. ವಿ. ಹರಿಕೃಷ್ಣ ಸಂಗೀತ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಹಾಡುಗಳು ರಿಲೀಸ್ ಆಗಿ ಸದ್ದು ಮಾಡ್ತಿವೆ. ಸೂರ್ಯಗಾಗಿಯೇ ದರ್ಶನ್ ಗರಡಿ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸೋಕೆ ಒಪ್ಪಿಕೊಂಡಿದ್ದಾರೆ. ಇನ್ನು ಚಿತ್ರದ ಸ್ಪೆಷಲ್ ಸಾಂಗ್‌ಗೆ ನಿಶ್ವಿಕಾ ನಾಯ್ಡು ಹೆಜ್ಜೆ ಹಾಕಿದ್ದಾರೆ. 

ಸೊಲ್ಲಾಪುರ, ರಾಣೆಬೆನ್ನೂರು ಪೈಲ್ವಾನರು ಸೇರಿದಂತೆ ಒರಿಜಿನಲ್ ಪೈಲ್ವಾನರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿಕ್ಕಜಾಲದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಕುಸ್ತಿ ಅಖಾಡ ಸೆಟ್ ಹಾಕಿ ಚಿತ್ರದ ಮುಖ್ಯ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಇನ್ನು ಟ್ರೈಲರ್ ರಿಲೀಸ್ ದಿನ ಮೊದಲಬಾರಿ ನಿಶ್ವಿಕಾ ರಾಣೆಬೆನ್ನೂರಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ನಿರೂಪಕಿ ಅನುಶ್ರೀ ಅವರು ನಿಶ್ವಿಕಾ ಅವರನ್ನು ಸ್ಟೇಜ್ ಗೆ 
ಕರೆದು ಹೊಡಿರಿ ಹಲಿಗಿ ಡಾನ್ಸ್ ಮಾಡಿಸಿದ್ದಾರೆ. ಅವರ ಡ್ಯಾನ್ಸ್ ನೋಡಿ ಅಭಿಮಾನಿಗಳು ಶಿಳ್ಳೆ ಹಾಕಿ ಸಂತೋಷ ಪಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.