ಮಾಜಿ CM, DCM ಗೆ ನೋಟೀಸ್, PSI ಹಗರಣದಲ್ಲಿ ಕೋಟಿ ಲೂಟಿ ಮಾಡಿದ್ದು ಯಾರು ಗೊ‌.ತ್ತಾ

 | 
Bd

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ ಎನ್‌ ಅಶ್ವತ್ಥ್ ನಾರಾಯಣ್, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಬಿಜೆಪಿ ಮುಖಂಡ ಬಸವರಾಜ ದಡೇಸುಗೂರು ಅವರಿಗೆ ನೋಟಿಸ್ ಜಾರಿಯಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದ ಆಯೋಗವು ನೋಟಿಸ್‌ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ಪಿಎಸ್‌ಐ ಪ್ರಕರಣದಲ್ಲಿ ಅಭ್ಯರ್ಥಿಗಳು ನೀಡಿದ ಮಾಹಿತಿ ಆಧರಿಸಿ ರಾಜಕಾರಣಿಗಳಿಗೆ ಆಯೋಗವು ನೋಟಿಸ್‌ ಜಾರಿ ಮಾಡಿದ್ದು, ಬುಧವಾರ ಆಯೋಗದ ಮುಂದೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಮೇಲೆ ಉಲ್ಲೇಖಿಸಿರುವ ರಾಜಕಾರಣಿಗಳು ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಗಂಭೀರ ಹೇಳಿಕೆಗಳನ್ನು ನೀಡಿದ್ದರು. 

ಅಶ್ವತ್ಥನಾರಾಯಣ, ದಡೇಸುಗೂರು ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದನ್ನು ಇಲ್ಲಿ ನೆನೆಯಬಹುದಾಗಿದೆ. 2021ರ ಅಕ್ಟೋಬರ್‌ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಕಲಬುರ್ಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ 52 ಅಭ್ಯರ್ಥಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು. ಆರೋಪಿ ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವೆಗಳು ಸಾಮಾನ್ಯ ನೇಮಕಾತಿ ತಿದ್ದುಪಡಿ ನಿಯಮಗಳ ಪ್ರಕಾರ ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.