ಹಲವಾರು ಪ್ರಶಸ್ತಿ ಪಡೆದ ನಮ್ಮೆಲ್ಲರ ನೆಚ್ಚಿನ ರಂಗಭೂಮಿ ಕಲಾವಿದ ಪತ್ನಿ ಜೊತೆ ಆತ್ಮಹ.ತ್ಯೆ

 | 
Js

ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ  ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರು ಜತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇವರ ಸಾವಿನ ಬಗ್ಗೆ ಬಹಳಷ್ಟು ಊಹಾಪೋಹಗಳು ಎದ್ದಿವೆ.ಲೀಲಾಧರ ಶೆಟ್ಟಿ ಹಿಂದೆ ಕಾಪು ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ಮಂಗಳವಾರ ಮಧ್ಯರಾತ್ರಿ ಸುಮಾರು 12.30ಕ್ಕೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇಬ್ಬರೂ ತಮ್ಮ ಮನೆಯ ಜಂತಿಗೆ ಒಂದೇ ಸೀರೆಯನ್ನು ಬಿಗಿದುಕೊಂಡು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಕಾಪು ಸಹಿತ ಉಡುಪಿ ಜಿಲ್ಲೆಯಾದ್ಯಂತ ಜನಪ್ರಿಯರಾಗಿದ್ದ ಶೆಟ್ಟಿ ದಂಪತಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇದೀಗ ತಿಳಿದುಬಂದಿದೆ.

ಬುಧವಾರ ಬೆಳಗ್ಗೆ ಈ ಆಘಾತಕಾರಿ ಸುದ್ದಿ ತಿಳಿದು ಸ್ಥಳೀಯರು ಲೀಲಾಧರ ಶೆಟ್ಟಿ ಮನೆಗೆ ಧಾವಿಸಿದ್ದಾರೆ. ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ, ಒಮ್ಮೆ ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಕಾಪು ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಜನಪ್ರಿಯತೆ ಗಳಿಸಿದ್ದರು.

ನಡುವೆ ಲೀಲಾಧರ ಶೆಟ್ಟಿ ದಂಪತಿ ಸಾವನ್ನಪ್ಪುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಮಕ್ಕಳಿಲ್ಲದ ಕಾರಣ ಸುಮಾರು 16 ವರ್ಷದ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡಿದ್ದು, ಈ ನಡುವೆ ಆಕೆ ಮನೆ ಬಿಟ್ಟು ಹೋಗಿದ್ದಳು. ಇದೇ ವಿಚಾರದಲ್ಲಿ ಲೀಲಾಧರ ಶೆಟ್ಟಿ ಹಾಗೂ ವಸುಂಧರಾ ಎಲ್‌ ಶೆಟ್ಟಿ ರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಡಿಸೆಂಬರ್ 12ರಂದು ರಾತ್ರಿ ಕುತ್ತಿಗೆಗೆ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದಾರೆ. 

ಇವರ ಸಾವಿಗೆ ಇನ್ಯಾವುದೇ ಬೇರೆ ಕಾರಣಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಲೀಲಾಧರ ಶೆಟ್ಟಿ ನಿಧನಕ್ಕೆ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರದ ನೂರಾರು ಮಂದಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.