ನ ಟ ಪ್ರಜ್ವಲ್ ದೇವರಾಜ್ ಇನ್ನಿ ಲ್ಲ; ಎಂಬ ಪೋಸ್ಟ್ ವೈರ ಲ್, ಬೇಸರ ಹೊಸ ಹಾಕಿದ ನ ಟ

 | 
Ju

ಕನ್ನಡ ಚಿತ್ರರಂಗ ಚಾಕೋಲೇಟ್ ಬಾಯ್ ಪ್ರಜ್ವಲ್ ದೇವರಾಜ್‌ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸುತ್ತ ಸಖತ್ ಬ್ಯುಸಿಯಾಗಿದ್ದಾರೆ. ಈ ನಡುವೆ ಪ್ರಜ್ವಲ್ ಇನ್ನಿಲ್ಲ ಅನ್ನೋ ಫೋಟೋ ಕೂಡ ವೈರಲ್ ಆಗುತ್ತಿದೆ. ಪ್ರಜ್ವಲ್ ದೇವರಾಜ್‌ ಫೋಟೋಗೆ ಹಾರ ಹಾಕಿರುವುದು ಹಾಗೂ ಫೋಟೋ ಮುಂದೆ ಪೂಜೆ ಮಾಡಿರವಂತಿದೆ. ಇದು ನಟನ ಗಮನಕ್ಕೆ ಬಂದಿದೆ. 

ಫೋಟೋ ವೈರಲ್ ಆಗುತ್ತಿದ್ದಂತೆ  ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ ವದಂತಿಗಳು ಸುಳ್ಳು ಎಂದು ಆಪ್ತರು ಸ್ಪಷ್ಟನೆ ಕೊಟ್ಟಿದ್ದಾರೆ. ನಿಜಕ್ಕೂ ಪ್ರಜ್ವಲ್ ಆರೋಗ್ಯವಾಗಿದ್ದಾರೆ, ಪತ್ನಿ ರಾಗಿಣಿ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿದ್ದು ಪತಿ ಜೊತೆ ಜಾಲಿ ಮಾಡುತ್ತಿರುವ ಫೋಟೋ ಹಾಕಿದ್ದಾರೆ. ಹೀಗಾಗಿ ಪ್ರಜ್ವಲ್ ಸೇಫ್‌ ಎಂದು ಅಭಿಮಾನಿಗಳಿಗೆ ತಿಳಿದು ಬಂದಿದೆ. 

ಈ ಫೋಟೋ ವೈರಲ್ ಆಗಿರುವುದಕ್ಕೆ ದೇವರಾಜ್‌ ಕುಟುಂಬದವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ಪ್ರಜ್ವಲ್ ಕ್ಷೇಮವಾಗಿದ್ದಾ ಆರೋಗ್ಯವಾಗಿದ್ದಾರೆ ಯಾವುದೇ ಬದಲಾವಣೆ ಆಗಿಲ್ಲ ನೆಮ್ಮದಿಯಿಂದ ಜೀವನ ಮಾಡುತ್ತಿದ್ದಾರೆ ಯಾಕೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾಗಿ ವರದಿಯಾಗಿದೆ. ವೈರಲ್ ನ್ಯೂಸ್ ಕ್ರಿಯೇಟ್ ಮಾಡುತ್ತಿರುವವರ ಮೇಲೆ ದೂರು ನೀಡಲು ಮುಂದಾಗಿದ್ದಾರೆ.

ಸದ್ಯ ಪ್ರಜ್ವಲ್ ಅಭಿಮಾನಿಗಳು ನಿಟ್ಟುಸಿರುಬಿಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ.ಪ್ರಜ್ವಲ್ ಅವರ ಫೋಟೋಗಳನ್ನು ದುರ್ಬಳಕೆ ಮಾಡಲಾಗಿದೆ. ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಪ್ರಜ್ವಲ್ ಕ್ಷೇಮವಾಗಿ ಇದ್ದಾರೆ. ಇದು ಸುಳ್ಳು ಸುದ್ದಿ ಎಂದು ಪ್ರಜ್ವಲ್ ದೇವರಾಜ್ ಅವರ ಆಪ್ತರೊಬ್ಬರು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.