ಪ್ರಜ್ವಲ್ ರೇವಣ್ಣ ಕರಾಳ ಮುಖ ಬಿ ಚ್ಚಿಟ್ಟ ಯುವತಿ; ಹಾಸನದ ಜನ ತತ್ತರ
ಹಾಸನ ಸಂಸದ, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇದರ ಜೊತೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಮಾತ್ರವಲ್ಲ ಹೆಚ್ ಡಿ ರೇವಣ್ಣ ಮೇಲೂ 47 ವರ್ಷದ ಸಂತ್ರಸ್ಥೆಯೊಬ್ಬಳು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಸದ್ಯ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದಾರೆ. ಹಾಸನಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ ಐ ಆರ್ ದಾಖಲು ಮಾಡಲಾಗಿದೆ. ನೇರವಾಗಿ ಪ್ರಜ್ವಲ್ ರೇವಣ್ಣ ಮತ್ತು ಹೆಚ್‌ಡಿ ರೇವಣ್ಣ ವಿರುದ್ದ ಸಂತ್ರಸ್ಥೆ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಪದೇ ಪದೆ ಹಿಂಬಾಲಿಸಿ ದೌರ್ಜನ್ಯ ಎಸಗಿದ ಬಗ್ಗೆ ಆರೋಪಿಸಿದ್ದಾರೆ.
ಮಹಿಳೆಯ ಘನತೆಗೆ ಧಕ್ಕೆ ಆರೋಪಿ ಸೇರಿ ಹಲವು ಐಪಿಸಿ ಸೆಕ್ಷೆನ್ ಗಳಡಿ ಕೇಸ್ ದಾಖಲಾಗಿದೆ. IPC ಸೆಕ್ಷನ್ 354A, 354D, 506, 509ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ದೂರಿನಲ್ಲಿ ದೌರ್ಜನ್ಯದ ಬಗ್ಗೆ ಸಂತ್ರಸ್ಥ ಮಹಿಳೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೊಳೆನರಸೀಪುರ ನಗರ ಠಾಣೆಗೆ ಹಾಜರಾಗಿ ನೀಡಿದ ದೂರಿನಲ್ಲಿ ಎಚ್‌ಡಿ ರೇವಣ್ಣ ಎ1 ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪದಲ್ಲಿ ದೂರು ನೀಡಿದ್ದಾರೆ.ದೂರು ನೀಡಿರುವ ಸಂತ್ರಸ್ಥೆಗೆ ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೈರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು.
2015 ರಲ್ಲಿ ತಮ್ಮ ಮನೆಗೆ ಅಡುಗೆ ಕೆಲಸಕ್ಕೆ ಬರುವಂತೆ ಹೇಳಿದ್ದರು. ಒಟ್ಟು 6 ಜನ ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡ್ತಾ ಇದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ಆಹ್ವಾನಿಸಿ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತಾವು ರೂಂನಲ್ಲಿದ್ದಾಗ ಹಣ್ಣು ಕೊಡೊ ನೆಪದಲ್ಲಿ ಕರೆದು ಸೀರೆ ಹಿಡಿದು ಎಳೆದಾಡಿದ್ದಾರೆ. ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ದೌರ್ಜನ್ಯ ಎಸಗಿದ್ದಾರೆಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.