ಮೊಟ್ಟಮೊದಲ ಬಾರಿಗೆ ಕ್ರಿಶ್ಚಿಯನರ ಬಗ್ಗೆ ಮಾತಾನಾಡಿದ ಪ್ರಕಾಶ್ ರಾಜ್

 | 
Jd
ಸಿನಿಮಾಕ್ಕಿಂತ ಇಲ್ಲ ಸಲ್ಲದ ಕಾರಣಗಳಿಗೆ ಸುದ್ದಿಯಾಗುವ ಪ್ರಕಾಶ್ ರಾಜ್ ಮತ್ತೊಮ್ಮೆ ಈಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ.ಕುಂಭ ಮೇಳ ಎನ್ನುವುದು ಪುಣ್ಯ ಸ್ಥಾನ. ಹಲವರಿಗೆ ಅದರ ಮೇಲೆ ನಂಬಿಕೆ ಇದೆ, ಅಲ್ಲಿ ಹೋದರೆ ತಪ್ಪೇನು? ನಂಬಿಕೆ ಇದ್ದವರು ಹೋಗುತ್ತಾರೆ. ಅವರವರ ನಂಬಿಕೆ ಅವರವರಿಗೆ. ಯಾರೊಬ್ಬರ ನಂಬಿಕೆಯನ್ನು ಪ್ರಶ್ನೆ ಮಾಡಲು ನಾನ್ಯಾರು ಎಂದು ಪ್ರಶ್ನಿಸಿದ್ದಾರೆ. ಹಾಗಂತೆ ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನಾನು ದೇವರು ಇಲ್ಲದೇ ಇನ್ನೂ ಕೆಲ ವರ್ಷ ಬದುಕುತ್ತೇನೆ. ಆದರೆ ಮನುಷ್ಯರು ಇಲ್ಲದೇ ನಾನು ಬದುಕುವುದಿಲ್ಲ. ನಮಗೆ ಏನೇ ಸಮಸ್ಯೆ ಬಂದರೂ ನಮಗೆ ಮನುಷ್ಯರು ಬೇಕು.
ಅದನ್ನು ನಂಬಿ ಬದುಕಿದವನು ನಾನು. ಹಾಗಂತ ಬೇರೆಯವರ ನಂಬಿಕೆಯನ್ನು ಪ್ರಶ್ನೆ ಮಾಡುವುದಿಲ್ಲ. ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಂತೋಷ ಇರುತ್ತದೆ. ಅವರ ಮನಸ್ಸಿಗೆ ಶಾಂತಿ, ಚೈತನ್ಯ ಕೊಡುತ್ತದೆ ಎಂತಾದರೆ ಅವರು ಅಲ್ಲಿಗೆ ಹೋದರೆ ತಪ್ಪೇನೂ ಇಲ್ಲ. ಆದರೆ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳುವುದು, ಯಾರದ್ದಾದರೂ ವಿರುದ್ಧ ಸುಳ್ಳು ಸುದ್ದಿ ಹರಿಬಿಡುವುದನ್ನು ನಾನು ಒಪ್ಪುವುದಿಲ್ಲ, ಅದನ್ನು ಸಹಿಸುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ವೇಳೆ ತಮ್ಮ ಪತ್ನಿಯ ಬಗ್ಗೆ ಮಾತನಾಡಿರುವ ಪ್ರಕಾಶ್‌ ಅವರು, ನನ್ನ ಹೆಂಡತಿ ಹೋಮ ಮಾಡುತ್ತಾಳೆ, ದೇವಸ್ಥಾನಕ್ಕೆ ಹೋಗುತ್ತಾಳೆ. ಅದನ್ನು ನಾನು ಎಂದಿಗೂ ಬೇಡ ಎಂದಿಲ್ಲ. ಅದು ಆಕೆಯ ನಂಬಿಕೆ. ಆದ್ದರಿಂದ ಕುಂಭಮೇಳಕ್ಕೆ ನಂಬಿಕೆ ಮೇಲೆ ಹೋದರೆ ನನ್ನದೇನೂ ಸಮಸ್ಯೆಯಿಲ್ಲ ಎಂದಿದ್ದಾರೆ. ಕುಂಭಮೇಳದಲ್ಲಿ ಮಿಂದೆದ್ದರೆ ಬಡತನ ನಿರ್ಮೂಲನ ಆಗುವುದಿಲ್ಲ ಎನ್ನುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್‌ ಅವರು, ಆ  ಈ ಬಗ್ಗೆ ನಾನು ಏನೂ ಹೇಳುವುದಿಲ್ಲ.
ಯಾರ ನಂಬಿಕೆ ನಡುವೆ ನಾನು ಬರುವುದಿಲ್ಲ. ಒಟ್ಟಿನಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎನ್ನುವುದು ನನ್ನ ಆಸೆ ಎಂದಿದ್ದಾರೆ. ಇದೇ ವೇಳೆ ಧರ್ಮದ ಬಗ್ಗೆ ಮಾತನಾಡಿರುವ ಅವರು, ನಾನು ಸದಾ ಹಿಂದೂ ಧರ್ಮದ ವಿರುದ್ಧ ಮಾತ್ರ ಮಾತನಾಡುತ್ತೇನೆ ಎನ್ನುವುದು ಸರಿಯಲ್ಲ. ಕ್ರೈಸ್ತ ಧರ್ಮವೆನ್ನುವುದು ಮಾಫಿಯಾ ಎಂದಿದ್ದೇನೆ. ಮುಸ್ಲಿಮರಲ್ಲಿ ಭಯೋತ್ಪಾದಕರೂ ಇದ್ದಾರೆ ಎಂದಿದ್ದೇನೆ. ಅದ್ಯಾವುದೂ ಹೈಲೈಟ್‌ ಆಗುವುದಿಲ್ಲ. ನನ್ನ ಆಸೆ ಎಲ್ಲರಲ್ಲಿಯೂ ಸಾಮರಸ್ಯ ಮೂಡಬೇಕು ಎನ್ನುವುದು ಅಷ್ಟೇ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.