'PSI ಪ್ರಶ್ನೆ ಪತ್ರಿಕೆ ಮತ್ತೆ ಲೀ.ಕ್' ಒಂದು ಹುದ್ದೆಗೆ 85 ಲಕ್ಷ ಡೀಲ್ ಮಾಡಿರುವ ಕಡು ಭ್ರಷ್ಟರು

 | 
H

ದೇಶದಲ್ಲೇ ಸಂಚಲನ ಮೂಡಿಸಿದ್ದ ಕರ್ನಾಟಕದ ಪಿಎಸ್ಐ ಹಗರಣದ ತನಿಖೆ ನಡೆಯುತ್ತಲೇ ಇದೆ. ಇದರ ನಡುವೆ ಕೋರ್ಟ್ ಆದೇಶದಂತೆ ಮರು ಪರೀಕ್ಷೆ  ನಡೆಸಲು ಸಕಲ ಸಿದ್ಧತೆ ನಡೆದಿದೆ. ಇದೇ ಜನವರಿ 21ರಂದು ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟರ್  ಹಾಗೂ ಜನವರಿ 23ರಂದು ಪಿಎಸ್‌ಐ ಮರು ಪರೀಕ್ಷೆ ನಡೆಯಲಿದೆ.

ಈ ಹೊತ್ತಲ್ಲೇ ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋ ಶಂಕೆ ವ್ಯಕ್ತವಾಗಿದೆ. ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಪ್ರಶ್ನೆ ಪತ್ರಿಕೆ ಲೀಕ್ ಮಾಡಿರೋ ಶಂಕೆ ವ್ಯಕ್ತವಾಗಿದೆ. ಇದು ಈಗಾಗಲೇ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆ ಎದುರು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪಿ.ಎಸ್.ಐ.ಮತ್ತು ಸಿಟಿಐ ಪರೀಕ್ಷೆ ಪತ್ರಿಕೆ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಂಟಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿರೋ ಲಿಂಗಯ್ಯ ಎಂಬುವನದ್ದೇ ಎನ್ನಲಾದ ಆಡಿಯೋ ವೈರಲ್ ಆಗಿದೆ.ಮೂರ್ನಾಲ್ಕು ದಿನಗಳಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ ಪೆಕ್ಟರ್ ಪರೀಕ್ಷೆ ಹಾಗೂ ಪಿಎಸ್ ಐ ಪರೀಕ್ಷೆ ನಡೆಯವಿದೆ. ಆದರೆ ಇದೀಗ ಪರೀಕ್ಷೆಯ ಸಂದರ್ಭದಲ್ಲೇ ಆಡಿಯೋ ವೈರಲ್ ಆಗಿದ್ದು, ಅವ್ಯವಹಾರ ನಡೆದಿರೋ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ.

ಟ್ಯಾಕ್ಸ್ ಇನ್ಸ್ ಪೆಕ್ಟರ್ ಗೆ 25 ಲಕ್ಷ, ಪಿಎಸ್ ಐಗೆ 85 ಲಕ್ಷ ಎಂಬ ಆಡಿಯೋ ವೈರಲ್ ಆಗಿದೆ. ಆಡಿಯೋ ವೈರಲ್ ಆಗುತ್ತಿದ್ದಂತೆ ನೂರಾರು ಪರೀಕ್ಷಾ ಅಭ್ಯರ್ಥಿಗಳು ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆ ಮುಂದೆ ಜಮಾವಣೆ ಆಗಿ ಪ್ರತಿಭಟನೆ ನಡೆಸಿದ್ರು. ಲಿಂಗಯ್ಯ ಎಂಬಾತನ ಮೇಲೆ ಪೇಪರ್ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಪರೀಕ್ಷೆಗಳ ವಿಚಾರವಾಗಿ ಡೀಲ್ ಮಾತನಾಡಿರೋ ಆರೋಪ ಕೇಳಿ ಬಂದಿದೆ. 

ಆಡಿಯೋ ಹಾಗೂ ಲಿಂಗಯ್ಯದು ಎನ್ನಲಾದ ವಾಟ್ಸ್ ಅಪ್ ಚಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ಕೊಡಲು ಪರೀಕ್ಷಾರ್ಥಿಗಳು ಮುಂದಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ