ಪಿಯುಸಿ ವಿದ್ಯಾರ್ಥಿನಿಯನ್ನು ಬಾಕ್ ನಲ್ಲಿ ಎಳೆದೊಯ್ದು ಮೂವರಿಂದ ನೀಚ ಕ್ೃತ್ಯ

 | 
ಹಹಬ

ಸಿದ್ಧಗಂಗಾ ಮಠದ ಬಳಿ ಮಾರ್ಚ್ 4ರಂದು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕಿತ್ತು.ಈ ಅಮಾನವೀಯ ಕೃತ್ಯ ನಡೆದು ಈಗಾಗಲೇ ಐದು ದಿನವಾಗಿದ್ದು, ಬಾಲಕಿ ಪರೀಕ್ಷೆಯಿಂದ ವಂಚಿತಳಾಗಿದ್ದಾಳೆ. ಪರೀಕ್ಷೆ ಬರೆಯಬೇಕಿದ್ದ ಬಾಲಕಿ ಆಸ್ಪತ್ರೆಯಲ್ಲಿ ನರಳುವಂತಾಗಿದೆ. ತೀವ್ರ ರಕ್ತಸ್ರಾವದಿಂದ ಬಳಲಿದ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾಳೆ. 

ತುಮಕೂರಿನ ಸಿದ್ದಗಂಗಾ ಜಾತ್ರೆಗೆ ಸ್ನೇಹಿತ ಜೊತೆಗೆ ಬಾಲಕಿಯೊಬ್ಬಳು ಬಂದಿದ್ದಳು. ಕುಳಿತುಕೊಂಡು ಮಾತನಾಡುವುದಕ್ಕಾಗಿ ಪಕ್ಕದಲ್ಲೇ ಇರುವ ಬೆಟ್ಟದ ಮೇಲೆ ಹೋಗಿದ್ದರು. ಈ ಬಾಲಕಿ ಮತ್ತು ಆಕೆಯ ಸ್ನೇಹಿತನನ್ನು ಹಿಂಬಾಲಿಸಿ ಬಂದ ಕಿಡಿಗೇಡಿಗಳು ಆರಂಭದಲ್ಲಿ ಅವರ ವಿಡಿಯೋ ಮಾಡಿಕೊಂಡರು. ಅದಾಗಿ ಆ ಬಾಲಕಿ ಮತ್ತು ಆಕೆಯ ಸ್ನೇಹಿತ ಬಳಿ ಹೋಗಿ ವಿಡಿಯೋ ತೋರಿಸಿ ಬೆದರಿಸಿದ್ದಾರೆ.

ವಿರೋಧಿಸಿದ ಸ್ನೇಹಿತನ ಮೇಲೆ ಹಲ್ಲೆ ನಡೆಸಿ, ಬಾಲಕಿಯನ್ನು ಬಂಡೇಪಾಳ್ಯಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗುವಾಗಲೂ ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ, ಈ ವಿಚಾರ ಬಹಿರಂಗಪಡಿಸಿದರೆ ವಿಡಿಯೋ ಬಹಿರಂಗಗೊಳಿಸುವದಾಗಿ ಬೆದರಿಸಿ ಕಳುಹಿಸಿದ್ದಾರೆ.ತೀವ್ರ ಹಲ್ಲೆಗೊಳಗಾಗಿದ್ದ ಬಾಲಕಿ ಮನೆಗೆ ಬಂದಾಗ ನಿತ್ರಾಣಗೊಂಡಿದ್ದಳು. ಪಾಲಕರು ವಿಚಾರಿಸಿದಾಗ ಸಾಮೂಹಿಕ ಅತ್ಯಾಚಾರವಾಗಿರುವ ವಿಚಾರ ಬಹಿರಂಗಗೊಳಿಸಿದ್ದಾಳೆ. 

ಕೂಡಲೇ ಪೋಷಕರು ದೂರು ದಾಖಲಿಸಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ತುಮಕೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಾದ ಬೆನ್ನಿಗೆ ಪೊಲೀಸರು ಬಂಡೇಪಾಳ್ಯಕ್ಕೆ ತೆರಳಿದ್ದು, ಆರೋಪಿಗಳಿಗೆ ಶೋಧ ನಡೆಸಿದ್ದಾರೆ. ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಅವರಿಂದ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಅಮೋಘ, ಹನುಮಂತ, ಪ್ರತಾಪ್ ಎಂದು ಗುರುತಿಸಲಾಗಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸಿ, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.