ದರ್ಶನ್ ಹುಟ್ಟು ಹಬ್ಬಕ್ಕೆ ಬಾರಿ ಮೊತ್ತದ ಉಡುಗೊರೆ ಕೊಟ್ಟ ರಕ್ಷಿತಾ ಪ್ರೇಮ್

 | 
Ghh

ಕನ್ನಡದ ಹೆಸರಾಂತ ನಟ ದರ್ಶನ್ ಅವರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದಾರೆ. ನಿನ್ನಯಷ್ಟೇ ಹುಟ್ಟು ಹಬ್ಬಕ್ಕಾಗಿ ಸಿಡಿಪಿ ರಿಲೀಸ್ ಆಗಿದ್ದು, ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ಅವರು ನಿರ್ಮಿಸುತ್ತಿರುವ, ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಡೆವಿಲ್ ಚಿತ್ರದ  ಫಸ್ಟ್ ಲುಕ್  ಟೀಸರ್ ಫೆಬ್ರವರಿ 15ರ‌ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. 

ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಅವರ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ  ಎರಡು ತಿಂಗಳ ಹಿಂದೆ ಸರಳವಾಗಿ ನೆರವೇರಿತ್ತು. ಆದರೆ ಚಿತ್ರತಂಡ ಡೆವಿಲ್ ಚಿತ್ರದ ಕುರಿತಂತೆ ಇನ್ನು ಯಾವುದೇ ಪ್ರಚಾರ ಕಾರ್ಯ ಆರಂಭ ಮಾಡಿರಲಿಲ್ಲ.

ಮೊದಮೊದಲು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟರ್ ಹಾಕಿ ಡೆವಿಲ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು.  ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ  ಮೇಲ್ಕಂಡ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಸದ್ಯದಲ್ಲೇ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು.

ದರ್ಶನ್‌ ಮತ್ತು ಪ್ರೇಮ್‌ ನಡುವೆ ಯಾವುದೂ ಸರಿಯಿಲ್ಲ. ಇಬ್ಬರ ನಡುವೆ ಮುನಿಸು ಮನೆ ಮಾಡಿದೆ ಎಂಬ ಸುದ್ದಿ ಈ ಹಿಂದಿನಿಂದಲೇ ಹರಿದಾಡುತ್ತಿತ್ತು. ಆದರೆ, ಇದೀಗ ಖುಷಿಯ ವಿಚಾರ ಏನೆಂದರೆ, ಆ ಮುನಿಸು ಮರೆತು ಇಬ್ಬರೂ ಎರಡು ದಶಕಗಳ ಬಳಿಕ ಮತ್ತೆ ಕೈ ಜೋಡಿಸಿದ್ದಾರೆ. ಈ ಜೋಡಿ ಸಿನಿಮಾ ಘೋಷಣೆಯಾಗುತ್ತಿದ್ದಂತೆ, ನಟಿ ರಕ್ಷಿತಾ ಪ್ರೇಮ್‌ ಸಹ ಕುಣಿದು ಕುಪ್ಪಳಿಸಿದ್ದಾರೆ. ಇನ್ನು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ದರ್ಶನ ಗೆ ಇದು ಬಹುದೊಡ್ಡ ಗಿಫ್ಟ್ ಎಂದು ಕೂಡ ಬರ್ದಿಕೊಂಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.