ಬಾರ್ ಮಾಲೀಕ ರಮಾನಂದ ಶೆಟ್ಟಿ ಅವರು ಅಶ್ವಿನಿ ಅವರನ್ನು ನೋಡಿದ್ದು ಎಲ್ಲಿ ಗೊ ತ್ತಾ

 | 
ಪ
ಯಶಸ್ವಿ ಉದ್ಯಮಿಯಾಗಿದ್ದ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಹೈಸ್ಕೂಲು ದಿನಗಳಿಂದಲೇ ಪ್ರೀತಿಸಿ ಮದುವೆಯಾಗಿದ್ದರು. ಅಪ್ಪಟ ಸನಾತನ ಸಂಸ್ಕಾರ ಪ್ರಿಯರಾಗಿದ್ದ ಅಶ್ವಿನಿ ಶೆಟ್ಟಿ, ಸಾಮಾಜಿಕ ಜಾಲತಾಣಗಳ್ಲಲಿ ರೀಲ್ಸ್‌ಗಳ ಮೂಲಕ ಹಿಂದೂ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳನ್ನು ಹೇಳುತ್ತಾ ತನ್ನದೇ ಅಭಿಮಾನಿ ಬಳ‍ಗವನ್ನು ಹೊಂದಿದ್ದರು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಅವರು, ಸಾಮಾಜಿಕ ಕ್ಷೇತ್ರ, ಸಾಹಿತ್ಯ, ನೃತ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.
ಆದರೆ ಅಂತಹ ಹಿರಿಯ ಜೀವಗಳು ಇನ್ನಿಲ್ಲವಾಗಿದೆ. ಉಡುಪಿ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ರಮಾನಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 
ಅವರ ನಂತರದಲ್ಲಿ ಅವರ ಧರ್ಮಪತ್ನಿ ಸಹ ಮೃತ ಪಟ್ಟಿದ್ದಾರೆ. ಬಂಗಲೆಯಲ್ಲಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಈ ಅಗ್ನಿ ದುರಂತದಲ್ಲಿ ಇವರ ಇಬ್ಬರು ಮಕ್ಕಳಾದ ಅಂಶುಲಾ ಶೆಟ್ಟಿ ಹಾಗೂ ಅಭಿಕ್ ಶೆಟ್ಟಿ ರಕ್ಷಿಸಲ್ಪಟ್ಟಿದ್ದರು. ದಟ್ಟ ಹೊಗೆಯಿಂದ ಪಾರಾಗಲು ಇವರು ಕೂಡಲೇ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿ ಜೀವ ಉಳಿಸಿಕೊಂಡಿದ್ದರು. 
ಅಶ್ವಿನಿ ಅವರು, ಬಿಜೆಪಿ ಮಹಿಳಾ ಮೋರ್ಚಾದ ನಗರ ಘಟಕದ ಅಧ್ಯಕ್ಷೆಯಾಗಿದ್ದರು. ಸಾಮಾಜಿಕ ಮಾಧ್ಯಮಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ ಮತ್ತು ಯೂಟ್ಯೂಬ್‌ ವಿಡಿಯೊಗಳ ಮೂಲಕ ಅಶ್ವಿನಿ ಅವರು ಪ್ರಸಿದ್ಧರಾಗಿದ್ದರು. ಆದಿ ಉಡುಪಿಯ ಪಂದುಬೆಟ್ಟುವಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.