ರಾಮೇಶ್ವರಂ ಕೆಫೆ ಸ್ಫೋ,ಟ ಕೇ,ಸ್, ಕೊನೆಗೂ ಬಾಂಬ್ ಇಟ್ಟಿದ್ದ ಉಗ್ರ ಅ,ರೆಸ್ಟ್

 | 
ಹ೬೭

ಕೆಲ ದಿನಗಳ ಹಿಂದಷ್ಟೇ ಎಲ್ಲರ ಗಮನ ಸೆಳೆದಿದ್ದ ರಾಮೇಶ್ವರಂ ಕಫೆ ಬ್ಲಾಸ್ಟ್ ನ ಮುಖ್ಯ ಸೂತ್ರದಾರರು ಇದೀಗ ಸೆರೆ ಆಗಿದ್ದಾರೆ.ರಾಮೇಶ್ವರಂಫೆ ಬ್ಲಾಸ್ಟ್  ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ದ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಿಬ್ಬರು ನಕಲಿ ದಾಖಲಾತಿಗಳನ್ನು ನೀಡಿ ಕೋಲ್ಕತ್ತಾದ ಮನೆಯನ್ನು ಬಾಡಿಗೆ ಪಡೆದಿದ್ದರು. ಬಾಡಿಗೆ ಪಡೆಯುವ ಮೊದಲು ಲಾಡ್ಜ್ ಗಳಲ್ಲಿ ಉಳಿದುಕೊಂಡಿದ್ದರು.


ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದರು.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ. ಒಟ್ಟು ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಕೂಡ ಇದೀಗ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೋಲೀಸ್ ಕಸ್ಟಡಿಯಲ್ಲಿ ಇಡಲಾಗಿದೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.