ಕರ್ನಾಟಕದ ಕುಡುಕರಿಗೆ ಬೆಂಬಲಿಸಿದ ರಂಗಣ್ಣ, ಎಣ್ಣೆ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ

 | 
ಕ್

ಈಗಾಗಲೇ ರೇಷನ್ ಕಾರ್ಡ್ ಮೂಲಕ ಅಕ್ಕಿ ಹೇಗೆ ನೀಡುತ್ತೀರೋ ಹಾಗೆಯೇ ಎಣ್ಣೆಯ ಬಾಟಲ್ ನೀಡಿ ಎಂದು ಕುಡುಕರ ಸಂಘ ಬೇಡಿಕೆ ಇಟ್ಟಿರುವ ಬೆನ್ನಲ್ಲೇ ಇದೀಗ ಹೊಸದೊಂದು ಬೇಡಿಕೆ ಇಟ್ಟಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದಿಂದ ಗುರುವಾರ ಪ್ರತಿಭಟನೆ ನಡೆದಿದೆ.

 ಒಬ್ಬರಿಗೆ 1 ಕ್ವಾರ್ಟರ್ ನಿಗದಿ ಮಾಡಿ ಬಾರ್ ಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಬಾರ್ ‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ, ಮದ್ಯಪ್ರಿಯರ ಭವನ ಸ್ಥಾಪಿಸಬೇಕು. ಡಿಸೆಂಬರ್ 31 ಮದ್ಯಪಾನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು. ಎಂದು ಸುವರ್ಣ ವಿಧಾನಸೌಧ ಬಳಿ ಮದ್ಯಪ್ರಿಯರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. 

ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ ಎಂಬ ಘೋಷಣಾ ವಾಕ್ಯದಡಿ ಸುವರ್ಣಗಾರ್ಡನ್ ಟೆಂಟ್ ‌ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸಿದೆ. ಲಿವರ್‌ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು. ಅಲ್ಲದೆ  ಎಣ್ಣೆ ಕುಡಿಯುವವರಿಗೆ ಕುಡುಕ ಎಂಬ ಪದ ನಿಷೇಧಿಸಿ ಮದ್ಯಪ್ರಿಯರು ಎಂದು ಮಾಡಬೇಕು ಎಂದು ಸಚಿವರ ಬಳಿ ಮದ್ಯಪ್ರಿಯರು ಬೇಡಿಕೆ ಇಟ್ಟಿದ್ದಾರೆ.

ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ಮದ್ಯಪ್ರಿಯರು ಬೇಡಿಕೆ ಇಟ್ಟರು. ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮದ್ಯ ಪ್ರೀಯರ ಬೇಡಿಕೆ ಕೇಳಿ ರಂಗಣ್ಣ ಅವರು ನಗಬೇಕೋ ಅಳಬೇಕೋ ತಿಳಿಯದಾಗಿದೆ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.