ಸಾಲದಲ್ಲಿದ್ದ ಅಜಯ್ ರಾವ್ ಗೆ ದೊಡ್ಡ ‌ಮೊತ್ತದ ಹಣ ಕೊಟ್ಟ ರವಿಚಂದ್ರನ್, ಇನ್ನುಮುಂದೆ ‌ಸಾಲ ಮಾಡಬೇಡ ಎಂದು ಬುದ್ದಿವಾದ ಹೇಳಿದ ರವಿಮಾಮ

 | 
Jhg
ನಿಮಗೆಲ್ಲಾ ಗೊತ್ತಿರುವ ಹಾಗೆ ಯುದ್ದಕಾಂಡ 2 ಸಿನಿಮಾ ಬರ್ತಿದೆ ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ ಯುದ್ಧಕಾಂಡ ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. 
ಪಾಂಚಜನ್ಯ ಮೊಳಗಿಸುವ ಮೂಲಕ ಟ್ರೇಲರ್ ಅನ್ನು ಅವರು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಅವರು, ನಿಮ್ಮ ಚಿತ್ರತಂಡ ನೋಡಿದರೆ, ನಿಮ್ಮಲ್ಲಿ ಶ್ರದ್ಧೆ ಕಾಣುತ್ತಿದೆ. ನಿಮ್ಮ ತಂಡದಲ್ಲಿ ಒಂದು ತೃಪ್ತಿ ಮತ್ತು ಆತ್ಮವಿಶ್ವಾಸವಿದೆ. ನಾನು ಪ್ರೇಕ್ಷಕನಾಗಿ ಸಿನಿಮಾ ನೋಡುತ್ತೇನೆ.
ಈಗಲೇ ಐದು ಗೋಲ್ಡ್ ಕ್ಲಾಸ್‍ ಟಿಕೆಟ್ ತೆಗೆದುಕೊಳ್ಳುತ್ತೇನೆ. ಸಿನಿಮಾ ನೋಡಿ ಫೋನ್‍ ಮಾಡುತ್ತೇನೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಹಣವನ್ನು ಸಹ ನೀಡಿ ಅಜಯ್ ರಾವ್ ಅವರ ಬೋಣಿ ಮಾಡಿಸಿ ಚಿತ್ರ ಹಿಟ್ ಆಗಲಿ ಎಂದು ಹರಸಿದರು. ನಾನು ಬರುವಾಗ ಅಜಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ.
ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಇಲ್ಲಿ ಸಾಲ ತೀರಿಸುವ ತಾಕತ್ತು ಬೇಕು. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡಿನ ಬೆಲೆ ಆಗಲೂ ಗೊತ್ತಿಲ್ಲ, ಈಗಲೂ ಗೊತ್ತಿಲ್ಲ. ನನಗೆ 100 ಡ್ಯಾನ್ಸರ್ಸ್ ಬೇಕು, 100 ಫೈಟರ್ಸ್ ಬೇಕು ಎಂದು ಹೇಳಿಬಿಡುತ್ತಿದ್ದೆ. ಅಪ್ಪ ಎಲ್ಲಿಂದ ಹಣ ತರುತ್ತಿದ್ದರು ಅಂತ ನನಗೆ ಗೊತ್ತಿಲ್ಲ. ಒಂದು ದಿವಸ ಅವರು ಇಲ್ಲದಾಗ ಗೊತ್ತಾಯಿತು. 
ದುಡ್ಡಿಲ್ಲದಿದ್ದರೂ ಇಲ್ಲಿ ಕನಸು ಮುಖ್ಯ. ಎಷ್ಟು ದುಡ್ಡಿದೆಯೋ, ಅಷ್ಟರಲ್ಲಿ ಸಿನಿಮಾ ಮಾಡುವುದನ್ನು ಕಲಿಯಬೇಕು. ಇಲ್ಲಿ ಕಂಟೆಂಟ್ ಮುಖ್ಯ, ಏನು ಹೇಳುತ್ತಿದ್ದೀವಿ ಅನ್ನೋದು ಮುಖ್ಯ ಎಂದು ರವಿಚಂದ್ರನ್ ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.