ರೇವಣ್ಣ ಅರೆಸ್ಟ್; ಒಮ್ಮೆಲ್ಲೇ ಸಿಡಿದೆದ್ದ ಕರುನಾಡ ಸ್ಟಾರ್ ನಿರೂಪಕ ರಂಗಣ್ಣ

 | 
Gui

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಉರುಳಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.

ಮಾಡಿದ್ದುಣ್ಣೋ ಮಹರಾಯ ಎನ್ನುವಂತೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಕಾರ್ಲಟನ್‌ ಭವನದಲ್ಲಿರುವ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್​ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಎಂದು ರಂಗಣ್ಣ ಹೇಳಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ರೇವಣ್ಣರ ಬಂಧನಕ್ಕೆ ಎಸ್ಐಟಿ ಅಧಿಕಾರಿಗಳು ತಲಾಶ್ ನಡೆಸಿದರು. ಇದೇ ವೇಳೆ ಅವರು, ದೇವೇಗೌಡರ ನಿವಾಸದಲ್ಲಿರುವುದು ತಿಳಿದು ಎರಡು ಕಾರುಗಳಲ್ಲಿ ಅಲ್ಲಿಗೆ ದೌಡಾಯಿಸಿದರು. ಸುಮಾರು ಐದಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ರೇವಣ್ಣ ಬಂಧನಕ್ಕೆ ತೆರಳಿದ್ದರು.

ಅಧಿಕಾರಿಗಳು ಬಂದು 15 ನಿಮಿಷವಾದ್ರೂ ಮನೆ ಬಾಗಿಲು ಓಪನ್ ಮಾಡಲಾಗಿರಲಿಲ್ಲ. ನಂತರ ರೇವಣ್ಣರೇ ಬಾಗಿಲು ತೆರೆದು ಹೊರಬಂದರು. ತಕ್ಷಣವೇ ಅವರನ್ನು ವಶಕ್ಕೆ ಪಡೆದು ಎಸ್​ಐಟಿ ಅಧಿಕಾರಿಗಳು ಕಚೇರಿಯತ್ತ ತೆರಳಿದರು.ರೇವಣ್ಣ ಬಂಧನದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಎಸ್ಐಟಿ ಕಚೇರಿ ಇರುವ ಕಾರ್ಲಟನ್‌ ಭವನದ ಬಳಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಹೈಗ್ರೌಂಡ್ಸ್‌ ಠಾಣೆಯ ಪೊಲೀಸರು ಬಂದೋಬಸ್ತ್‌ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.