ಗರ್ಲ್ಸ್ ಫ್ರೆಂಡ್ ಜೊತೆ ಸಂಚಿತ್ ಹೆಗ್ಡೆ ಹಾಟ್ ಸಿಂಗಿಂಗ್; ಕನ್ನಡಿಗರು ಅಚ್ಚುಮೆಚ್ಚು

 | 
Gyu

ಕನ್ನಡದ ಸ್ಟಾರ್ ಸಿಂಗರ್ ಸಂಜಿತ್ ಹೆಗ್ಡೆ  ಬರೀ ಕನ್ನಡಕ್ಕೆ ಸೀಮಿತವಾಗದೇ ತಮಿಳು, ತೆಲುಗು ಹಾಗೂ ಹಿಂದಿರಂಗದಲ್ಲಿಯೂ ತಮ್ಮ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಸಂಜಿತ್ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. 

ಬರೀ ಗಾಯನಕ್ಕೆ ಸೀಮಿತವಾಗದೇ ನಟನೆಯಲ್ಲಿಯೂ ತೊಡಗಿಸಿಕೊಂಡಿರುವ ಸಂಜಿತ್ ಈ  ಮೊದಲು ತಮಿಳು ಸಿನಿಮ ಒಂದರಲ್ಲಿ ವಿಜ್ಞಾನಿ ಪಾತ್ರದಲ್ಲಿ ಶೃತಿ ಹಾಸನ್ ಅವರೊಂದಿಗೆ ಕಾಣಿಸಿಕೊಂಡಿದ್ದರು.ಈಗ ಮತ್ತೊಂದು ಹೊಸ ಹಾಡಿನ ಮೂಲಕ ಪ್ರತ್ಯಕ್ಷರಾಗಿದ್ದಾರೆ. ಇದನ್ನು ಹಾಡಿ ಆ ಹಾಡಿನಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ.

ನಂಗೆ ಅಲ್ಲವಾ  ಅಂತಾ ಸಂಚಿತ್ ಹೆಗ್ಡೆ ಯುವ ನಟಿ ಸಂಜನಾ ದಾಸ್ ಜೊತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ಗೀತೆಯಲ್ಲ. ಬದಲಾಗಿ ಸಂಚಿತ್ ತಮ್ಮ ತಂಡದೊಂದಿಗೆ ಸೇರಿ ಸ್ವತಂತ್ರವಾಗಿ ರಚಿಸಿರುವ ಗಾನಬಜಾನ. ನಾಗಾರ್ಜುನ್ ಶರ್ಮಾ ಪದಪೊಣಿಸಿರುವ ಹಾಡಿಗೆ ಸಂಜಿತ್ ಹೆಗ್ಡೆ ಕಂಠ ಕುಣಿಸಿದ್ದಾರೆ. ಜೊತೆಗೆ ಸಂಗೀತ ಕೂಡ ಸಂಯೋಜಿಸಿದ್ದು, ಬಿಜೋಯ್ ಶೆಟ್ಟಿ ನಿರ್ದೇಶನದಲ್ಲಿ ‘ನಂಗೆ ಅಲ್ಲವ’ ಹಾಡು ಮೂಡಿಬಂದಿದೆ. 

ಯುವ ಪ್ರೇಮಿಗಳ ಆಂಥೆಮ್ ನಂತಿರುವ ನಂಗೆ ಅಲ್ಲವ ಗೀತೆ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತದೆ. ಈ ಹಾಡಿನ ಬಗ್ಗೆ ಮನಬಿಚ್ಚಿರುವ ಸಂಚಿತ್, ಈ ಹಾಡು ನನ್ನ ಜೀವನವನ್ನು ಬದಲಾಯಿಸಿತು. ನಾನು ತುಂಬಾ ಆತಂಕಗೊಂಡಿದ್ದೇನೆ ಮತ್ತು ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. ‘ನಂಗೆ ಅಲ್ಲವಾ’ ನನ್ನ ಪ್ರೀತಿಯ ಜೀವನದ ಪ್ರಯಣವನ್ನು ವ್ಯಕ್ತಪಡಿಸಲು ನನಗೆ ಸಹಾಯ ಮಾಡಿತು. ಈ ಪ್ರಯಾಣದಲ್ಲಿ ಭಾಗವಾಗಿರುವ ಪ್ರತಿಯೊಬ್ಬರಿಗೂ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಹಾಡು ಬಿಡುಗಡೆಯೊಂದಿಗೆ ಹೃದಯ ತುಂಬಾ ಹಗುರ ಎನಿಸುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.