ಆಸ್ಪತ್ರೆಯಲ್ಲಿ ತಾಯಿಯ ಸ್ಥಿತಿ ನೋಡಿ ಬೀದಿಬದಿ ಬಂದು ಎದ್ದು ಬಿದ್ದು ಕ.ಣ್ಣೀರಿಟ್ಟ ಮಗ
ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ತೀವ್ರ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಸೌಥ್ ಎಂಡ್ ಸರ್ಕಲ್ ಬಳಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆವರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.
ಕಳೆದ ಮೂರು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿತ್ತು. ಬುಧವಾರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ನಟಿ ಹೇಮಾ ಅವರ ಮಗ ಐರ್ಲೆಂಡ್ನಿಂದ ಬೆಂಗಳೂರಿಗೆ ಬುಧವಾರ ಆಗಮಿಸಿ, ತಾಯಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತನ್ನ ತಾಯಿ ಆರೋಗ್ಯ ಸುಧಾರಿಸುತ್ತಿದೆ. ಅವರಿಗೆ ರೆಸ್ಟ್ ಬೇಕು. ಈಗಲೇ ಏನು ಹೇಳಲು ಆಗುವುದಿಲ್ಲ. ವೈದ್ಯರ ಬಳಿ ನಾನು ಇನ್ನೂ ಮಾತನಾಡಿಲ್ಲ, ತಂದೆ ಮಾತನಾಡಿದ್ದಾರೆ. ನಾನು ವೈದ್ಯರ ಬಳಿ ಗುರುವಾರ ಮಾತನಾಡುತ್ತೇನೆ ಅಂತಾ ಕಣ್ಣೀರಿಡುತ್ತಾ ಹೇಳಿದ್ದಾರೆ.
ಇನ್ನು ಹಿರಿಯ ನಟಿಯ ಆರೋಗ್ಯ ವಿಚಾರಿಸಲು, ನಟಿ ತಾರಾ, ದೊಡ್ಡಣ್ಣ, ಸುಧಾರಾಣಿ, ಮಾಳವಿಕಾ ಅವಿನಾಶ್ ಸೇರಿದಂತೆ ಹಲವರು ಸ್ಯಾಂಡಲ್ ವುಡ್ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ಹಲವು ಕಲಾವಿದರು ಹಾರೈಸಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.