ದರ್ಶನ್ ಅಭಿಮಾನಿಗಳಿಗೆ ಎ.ಚ್ಚರಿಕೆ ಕೊಟ್ಟ ಶಿವಣ್ಣ; 'ನಿಮ್ಮನ್ನ ಬಿಡಲ್ಲ'

 | 
Hhu

ಕಳೆದ 2 ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಒಂದು ಅವಹೇಳನಕಾರಿ ಪೋಸ್ಟ್ ಹರಿದಾಡುತ್ತಿದೆ. ನಟ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನ ಗುರಿಯಾಗಿಸಿ ಪೋಸ್ಟ್ ಮಾಡಲಾಗಿದ್ದು ತೀವ್ರ ಚರ್ಚೆಗೆ ಗುರಿಯಾಗಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ನಿಂದನಾತ್ಮಕ ಪೋಸ್ಟ್ ಮಾಡಿದವರಿಗೆ ಈಗ ಸಂಕಷ್ಟ ಎದುರಾಗಿದೆ.

ದರ್ಶನ್ ಅಭಿಮಾನಿಗಳ ಬಳಗ ಎಂದೇ ಫೇಮಸ್ ಆಗಿರುವ ಗಜಪಡೆ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರ ಬಗ್ಗೆ ನಿಂದನಾತ್ಮಕ ಪೋಸ್ಟ್ ಮಾಡಲಾಗಿತ್ತು. ಐಪಿಎಲ್‌ನಲ್ಲಿ ಬೆಂಗಳೂರು ರಾಯಲ್‌ ಚಾಲೆಂಜರ್ಸ್ ಸೋಲಿಗೆ ಅಶ್ವಿನಿ ಅವರನ್ನು ಕರೆಸಿದ್ದೇ ಕಾರಣ ಎಂದು ಹೇಳಲಾಗಿತ್ತು. ಈ ಪೋಸ್ಟ್‌ಗೆ ಅಪ್ಪು ಫ್ಯಾನ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದೊಂದು ಸಹಿಸಲಾರದ ಕಿಡಿಗೇಡಿಗಳ ಕೃತ್ಯವಾಗಿದೆ. ಈ ಹಿನ್ನಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಶಿವಣ್ಣ ಕೂಡ ವಿನಂತಿಸಿ ಕೊಂಡಿದ್ದಾರೆ.

ಅಶ್ವಿನಿ ಪುನೀತ್ ರಾಜಕುಮಾರ್ ಎಲ್ಲವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ. ಅವಳು ಧೈರ್ಯ ತಂದುಕೊಂಡು ಎಲ್ಲವನ್ನು ಮರೆತು ಗಟ್ಟಿಯಾಗಿ ನಿಂತಿದ್ದಾಳೆ ಅಂತಹ ಮಹಿಳೆಯ ಮೇಲೆ ಅಪವಾದ ಮಾಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಇದು ಮುಂದುವರೆದರೆ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.