ರಾಜೀನಾಮೆ ಬಗ್ಗೆ ಸ್ಪಷ್ಟವಾಗಿ ಹೇಳಿಕೆ ಕೊಟ್ಟ ಸಿದ್ದರಾಮಯ್ಯ; ಬೆ.ಚ್ಚಿಬಿದ್ದ ಕರುನಾಡು
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲದೇ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ ಅವರು, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಸಿ.ಎಂ.ರಾಜಿನಾಮೆ ವಿಷಯ ಪ್ರಸ್ತಾಪ ಮಾಡಿದರು.
ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದ್ರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ ಎಂದು ಹೇಳಿದ್ದಾರೆ.ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯರನ್ನು ನಾವು ಉಳಿಸಿಕೊಳ್ಳಬೇಕು. ಹಾಗಾಗಿ ಸಿದ್ದರಾಮಯ್ಯರನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು ಎಂದು ಶ್ರೀನಿವಾಸ್ ತಿಳಿಸಿದ್ದಾರೆ.
ಇನ್ನು ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಕಾನೂನಾತ್ಮಕವಾಗಿ ಹಣೆಯುವ ತಂತ್ರ ರೂಪಿಸುತ್ತಿದ್ದಾರೆ. ಈ ಪ್ರಯತ್ನ ಸಫಲವಾಗಿರಲಿಕ್ಕಿಲ್ಲ. ಆದರೆ ಪ್ರಯತ್ನ ನಿರಂತರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಕಾಂಗ್ರೆಸ್ ನಲ್ಲಿ ಏನೂ ಸರಿಯಾಗಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕ, ಸಚಿವರೇ ಬಹಿರಂಗವಾಗಿ ಹೇಳುತ್ತಿದ್ದಾರೆ.
ಡಿ.ಕೆ. ಶಿವಕುಮಾರ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟು, ಅವರನ್ನು ಕಾರ್ನರ್ ಮಾಡುವ ಪ್ರಯತ್ನ ಮೊದಲ ದಿನದಿಂದಲೇ ಜಾರಿಯಲ್ಲಿದೆ. ಹೀಗಾಗಿ ಇಬ್ಬರ ನಡುವಿನ ಗುದ್ದಾಟ ಗೌಪ್ಯವಾಗಿ ಉಳಿದಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಸರ್ಕಾರದ ಅಸ್ತಿತ್ವಕ್ಕೇ ಗ್ಯಾರಂಟಿ ಇಲ್ಲದಾಗಿದೆ ಎಂದಿದ್ದಾರೆ. ಆದ್ರೆ ಸಿದ್ಧರಾಮಯ್ಯ ಮಾತ್ರ ರಾಜೀನಾಮೆ ನೀಡುವ ಮಾತೇ ಇಲ್ಲ ಎಂದಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.