ಬಹುದಿನಗಳ ಬಳಿಕ ದರ್ಶನ್ ಪರ ನಿಂತು ಮಾತಾನಾಡಿದ ಶ್ರೀಮುರಳಿ; ಕನ್ನಡಿಗರು ಫಿದ

 | 
Uhh
ದರ್ಶನ್‌ ಮತ್ತು ಶ್ರೀಮುರಳಿ ನಡುವೆ ಉತ್ತಮ ಸ್ನೇಹವಿದೆ. ಶ್ರೀ ಮುರುಳಿ ಎಲ್ಲ ಸಿನಿಮಾಕ್ಕೂ ದರ್ಶನ್ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಎರಡನೇ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 
ಕೊಲೆ ಕೇಸ್‌ನಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಎ1 ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳು ಸದ್ಯ ಕಂಬಿ ಹಿಂದಿದ್ದಾರೆ. ಈ ಹಿಂದೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿತ್ತು .
ಬಹುತೇಕ ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದರು. ಆಗಲು ಸಹ ಶ್ರೀ ಮುರುಳಿ ದರ್ಶನ್ ಪರ ಮಾತಾಡಿ ತಮ್ಮ ಗೆಳೆತನವನ್ನು ಗಟ್ಟಿ ಮಾಡಿಕೊಂಡಿದ್ದರು. ದರ್ಶನ್ ಚಿತ್ರೋದ್ಯಮಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ನಡುವೆ ಭಿನ್ನಾಭಿಪ್ರಾಯವಿದೆ ಎಂದಾಕ್ಷಣ ನನ್ನ ಮನಸ್ಸಿಗೆ ತಟ್ಟಿದ ವಾಸ್ತವ ವಿಷಯಗಳ ಬಗ್ಗೆ ಮಾತನಾಡುವುದನ್ನು ನಾನೆಂದಿಗೂ ನಿಲ್ಲಿಸುವುದಿಲ್ಲ. ಚಪ್ಪಲಿ ಎಸೆಯುವಂತಹ ಕೃತ್ಯಗಳಿಗೆ ಖಂಡಿತಾ ದರ್ಶನ್ ಅರ್ಹರಲ್ಲ, ಈ ಘಟನೆ ನನ್ನ ಮನಸ್ಸನ್ನು ಘಾಸಿಗೊಳಿಸಿದೆ.
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ ಎಂದು ನೆಚ್ಚಿನ ನಟನ ಬಗ್ಗೆ ಹೇಳಿಕೊಂಡಿದ್ದಾರೆ. ಎಲ್ಲವೂ ಸರಿ ಆದರೆ ದಯವಿಟ್ಟು ರೇಣುಕಾಸ್ವಾಮಿಯನ್ನು ಯಾರು ಹೀರೊ ಮಾಡಬೇಡಿ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.