ಬಹು ವರ್ಷಗಳ ಡೇಟಿಂಗ್ ಬಳಿಕ ಗೆಳಯನಿಗೆ ಕೈಕೊಟ್ಟ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ
Mar 5, 2025, 13:04 IST
|

ಮದುವೆ ಆಗ್ತಾರೆ ಇನ್ನೇನು ಅನ್ನುವಾಗಲೇ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ತಮನ್ನಾ ಭಾಟಿಯಾ ಅವರು ನಟ ವಿಜಯ್ ವರ್ಮಾ ಅವರೊಂದಿಗೆ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಅಲ್ಲದೆ ಇಬ್ಬರೂ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದು, ಬಾಲಿವುಡ್‌ನ ಕ್ಯೂಟ್ ಜೋಡಿ ಎಂದು ಕರೆಸಿಕೊಂಡಿದ್ದರು.
ಆದರೆ, ತಮನ್ನಾ ಹಾಗೂ ವಿಜಯ್ ವರ್ಮಾ ಪರಸ್ಪರ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದು ನಟಿಯ ಅಭಿಮಾನಿಗಳಿಗೂ ನಿಜಕ್ಕೂ ಶಾಕ್ ತರಿಸಿದೆ. ನಟರಾದ ವಿಜಯ್ ವರ್ಮಾ ಮತ್ತು ತಮನ್ನಾ ಭಾಟಿಯಾ ಹಲವು ವರ್ಷಗಳಿಂದ ಲವ್‌ನಲ್ಲಿದ್ದರು. ಶೀಘ್ರದಲ್ಲೇ ಇಬ್ಬರೂ ಮದುವೆ ಊಟ ಹಾಕಿಸಲಿದ್ದಾರೆ ಎಂದು ಎಲ್ಲರೂ ನಿರೀಕ್ಷೆಯಲ್ಲಿದ್ದರು. ಆದರೆ ದಿಢೀರನೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ತಮನ್ನಾ ಅವರ ಬ್ರೇಕಪ್ ವಿಚಾರ ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇಬ್ಬರೂ ನಟರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಿಂದ ಇಬ್ಬರ ಫೋಟೋಗಳನ್ನು ಡಿಲೀಟ್ ಮಾಡುವ ಮೂಲಕ ತಮ್ಮ ಬ್ರೇಕಪ್ ಸುಳಿವು ನೀಡಿದ್ದಾರೆ ಎಂದು ವರದಿಯಾಗಿದೆ.ವರದಿಗಳ ಪ್ರಕಾರ ವಿಜಯ್ ಮತ್ತು ತಮನ್ನಾ ಕಳೆದ ವಾರವೇ ಬ್ರೇಕಪ್ ಮಾಡಿಕೊಂಡಿದ್ದಾರೆ. ಆದರೆ, ಇಬ್ಬರೂ ಸ್ನೇಹಿತರಾಗಿ ಮುಂದುವರಿಯಲು ಇಚ್ಛಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಸಿನಿಮಾಗಳಲ್ಲಿ ಒಬ್ಬರೂ ಬ್ಯುಸಿಯಾಗಿರುವುದರಿಂದ ತಮ್ಮ ತಮ್ಮ ವೃತ್ತಿಜೀವನದ ಮೇಲೆ ಗಮನ ಹರಿಸಿದ್ದಾರೆ. ಆದರೆ, ಈ ಬಗ್ಗೆ ಅವರು ಎಲ್ಲಿಯೂ ಬಹಿರಂಗ ಹೇಳಿಕೆ ನೀಡದೆ ಸುಮ್ಮನಾಗಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳಲ್ಲಿ ಫೋಟೋ ಅಳಿಸಿ ಹಾಕುವ ಮೂಲಕ ಅಭಿಮಾನಿಗಳಿಗೆ ಬ್ರೇಕಪ್ ವಿಚಾರ ತಲುಪಿಸಿದ್ದಾರೆ ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.