ದಯವಿಟ್ಟು ಯಾರಾದರೂ ಸಹಾಯ ಮಾಡಿ, ವಿಡಿಯೋ ಮಾಡಿ ಕಣ್ಣೀರಿಟ್ಟ ನಟಿ ತನುಶ್ರೀ ದತ್ತಾ

 | 
Nz

      ನಟಿ ತನುಶ್ರೀ ದತ್ತಾ ಇನ್ ಸ್ಟಗ್ರಾಮ್ ನಲ್ಲಿ ತಾನು ಅನುಭವಿಸುತ್ತಿರುವ ಕಷ್ಟವನ್ನು ಹಂಚಿಕೊಂಡಿದ್ದಾರೆ. ಹೌದು ನನ್ನ ಮನೆಯಲ್ಲೇ ನನಗೆ ಕಿರುಕುಳ ನೀಡಲಾಗುತ್ತಿದೆ. ಈ ಬಗ್ಗೆ ಪೊಲೀಸರಿಗೆ ಕರೆ ಮಾಡಿದ್ದೇನೆ. ಕಳೆದ ಐದು ವಷ೯ಗಳಿಂದ ತುಂಬಾ ಕಿರುಕುಳ ಅನುಭವಿಸುತ್ತಿದ್ದು, ನನ್ನ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿಕೊಂಡಿದ್ದಾರೆ. 

     ನನ್ನ ಮನೆಯ ಹೊರಗಿನಿಂದ ಜೋರಾದ ಶಬ್ದ ಕೇಳಿ ಬರುತ್ತದೆ. ಒಮ್ಮೊಮ್ಮೆ ಮನೆಯ ಬಾಗಿಲು ಬಡಿಯುತ್ತಾರೆ. ಮನೆ ಕೆಲಸಕ್ಕೆಂದು ಬಂದು ಕಳ್ಳತನ ಮಾಡುತ್ತಾರೆ. ಈ ಬಗ್ಗೆ ಕಟ್ಟಡದ ಆಡಳಿತ ಮಂಡಳಿಗೆ ತಿಳಿಸಿದ್ದೇನೆ, ಆದರೆ ಏನೂ ಪ್ರಯೋಜನವಿಲ್ಲ ಎಂದಿದ್ದಾರೆ. 
     ಕಿರುಕುಳಗಳ ನಡುವೆಯೇ ನಾನು ಬದುಕು ಸಾಗಿಸುತ್ತಿದ್ದೇನೆ. ಇದರಿಂದ ನನ್ನ ಮನಸ್ಸನ್ನು ಬೇರೆಡೆ ಸೆಳೆಯಲು ಪ್ರಯತ್ನ ಮಾಡುತ್ತಿದ್ದೇನೆ. ಹೊರಗಿನ ಶಬ್ದ ಕೇಳದಿರಲೆಂದು ಹೆಡ್ ಫೋನ್ ಹಾಕಿಕೊಂಡೇ ಕುಳಿತಿರುತ್ತೇನೆ ಎಂದು ಹೇಳಿದ್ದಾರೆ. 
     ಇಂತಹ ಪರಿಸ್ಥಿತಿಯಲ್ಲಿ ನನಗೆ ಸಹಾಯ ಬೇಕಾಗಿದೆ ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿದ್ದಾರೆ ನಟಿ ತನುಶ್ರೀ ದತ್ತಾ.