ಮೋದಿ ಇಷ್ಟ ಪಟ್ರು ಅಂತ ತೇಜಸ್ವಿ ಸೂರ್ಯ ಮದುವೆ, ಚಂದುಳ್ಳಿ ಚೆಲುವೆ ಮುಖ ನೋಡಿ ಯಶ್ ಫಿದಾ
Mar 11, 2025, 15:22 IST
|

ಇತ್ತೀಚಿಗಷ್ಟೇ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.
ತೇಜಸ್ವಿ ಸೂರ್ಯ ಅವರ ಕುರಿತು ಹೆಚ್ಚೇನೂ ಹೇಳಬೇಕು ಎಂದೇನೂ ಇಲ್ಲ.ಆದರೆ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿಯಾರ್ಗಿರುತ್ತಾರೆ.
ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ
ಕನ್ನಡದ ವರನಟ ಡಾ.ರಾಜ್ಕುಮಾರ್ ಹಾಗೂ ಕಲ್ಪನಾ ನಟನೆಯ ಎರಡು ಕನಸು ಸಿನಿಮಾದ ಪೂಜಿಸಲೆಂದೆ ಹೂಗಳ ತಂದೆ.. ಹಾಡು ಹಲವರಿಗೆ ಫೇವರಿಟ್. ಈ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ ಯೂಟ್ಯೂಬ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ಹಾಡಿನ ಲಿಂಕ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ಹಾಡಿನ ಬಗ್ಗೆ ಹಾಗೂ ಶಿವಶ್ರೀ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.