ತಾಳಿ ಕಟ್ಟುವ ವೇಳೆ ಮದುಮಗಳ ಹಳೆ ಲವರ್ ಎಂಟ್ರಿ; ತಕ್ಷಣ ಹಸೆಮಣೆಯಿಂದ ಹೊರಟ ವಧು

 | 
Uu

ತಾಳಿ ಕಟ್ಟುವ ವೇಳೆ ಪ್ರಿಯಕರನ ಪ್ರವೇಶದಿಂದ ಮದುವೆ ಮುರಿದು ಬಿದ್ದಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಬೇಲೂರಿನ ಯುವತಿ ಹಾಗೂ ಶಿವಮೊಗ್ಗ ಮೂಲದ ಯುವಕನೊಂದಿಗೆ ಮದುವೆ ನಡೆಯಬೇಕಿತ್ತು.

ಆದರೆ ತಾಳಿ ಕಟ್ಟುವ ವೇಳೆ ಕಲ್ಯಾಣಮಂಟಪಕ್ಕೆ ಬಂದ ನವೀನ್​​ ಎಂಬಾತನಿಂದ ಮದುವೆಗೆ ಅಡ್ಡಿ ಆರೋಪ ಮಾಡಲಾಗಿದೆ. ತಾಳಿ ಕಟ್ಟುವ ವೇಳೆ ಪ್ರಿಯಕರನ  ಪ್ರವೇಶದಿಂದ ಮದುವೆ ಮುರಿದು ಬಿದ್ದಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಬೇಲೂರಿನ ಯುವತಿ ಹಾಗೂ ಶಿವಮೊಗ್ಗ ಮೂಲದ ಯುವಕನೊಂದಿಗೆ ಮದುವೆ ನಡೆಯಬೇಕಿತ್ತು.

ಆದರೆ ತಾಳಿ ಕಟ್ಟುವ ವೇಳೆ ಕಲ್ಯಾಣಮಂಟಪಕ್ಕೆ ಬಂದ ನವೀನ್​​ ಎಂಬಾತನಿಂದ ಮದುವೆಗೆ ಅಡ್ಡಿ ಆರೋಪ ಮಾಡಲಾಗಿದೆ. ತಾಳಿ ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ. ನನ್ನ ಜೊತೆ ಮದುವೆ ಮಾಡಿ ಎಂದು ಪಟ್ಟುಹಿಡಿದಿದ್ದಾನೆ. ಹೀಗಾಗಿ ಕಲ್ಯಾಣಮಂಟಪದಲ್ಲಿ ಕೆಲಕಾಲ‌ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಮಧ್ಯಪ್ರವೇಶಿಸಿದ ಬೇಲೂರು ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತೇಜಸ್ವಿನಿ ತನ್ನನ್ನ ಪ್ರೀತಿಸುತ್ತಿದ್ದಳು. ತನಗೆ ವಿಚಾರ ಮುಚ್ಚಿಟ್ಟು ಮದುವೆ ಮಾಡಿಕೊಳ್ಳಲಾಗುತ್ತಿದೆ ಎಂದು ಯುವಕ ಆರೋಪಿಸಿದ್ದಾನೆ. ಇತ್ತ ಪ್ರೀತಿ ವಿಚಾರ ತಿಳಿದ ಮದುಮಗ ಮದುವೆ ಬೇಡ ಎಂದು ಹೊರಟು ಹೋಗಿದ್ದಾನೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.