ಬಡವರ ಬಂಧು ಸಿದ್ದರಾಮಯ್ಯ ನವರಿಗೆ ಹಿಗ್ಗಾಮುಗ್ಗಾ ಬೈದ ಜನ ಸಾಮಾನ್ಯರು, ಯಾಕೆ ಏ.ನಾಯಿತು

 | 
ರಕದ

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. 

ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಿಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲದರ ಹಿಂದಿನ ರೂವಾರಿ ಸಿದ್ದರಾಮಯ್ಯ ನವರು ಎನ್ನಲಾಗುತ್ತಿದೆ. ಮಂಡ್ಯದ ಕೆರಗೋಡು ಗ್ರಾಮದ ಹನುಮ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯ್ತಿ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಕೆರಗೋಡು ಗ್ರಾಮದ ಹನುಮ ಧ್ವಜ ವಿವಾದ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. 

ಪ್ರತಿಭಟನೆ ವ್ಯಾಪಕವಾಗಿರುವಂತೆಯೇ ಇದೀಗ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿದೆ. ಈ ಕಾರಣದಿಂದ 12 ಕತ್ತೆ ವಯಸ್ಸಾಗಿದೆ ಸಿದ್ದರಾಮಯ್ಯನವರಿಗೆ ತಲೆಯಲ್ಲಿ ಮಾತ್ರ ಬುದ್ದಿಯಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.ಈ ನಡುವೆ ರಾಜ್ಯ ನಾಯಕತ್ವ ಕೂಡಾ ಇದೇ ರೀತಿಯಲ್ಲಿ ಬಿಜೆಪಿಗೆ ತಿರುಗೇಟು ನೀಡಲು ಮುಂದಾಗಿದೆ. 

ಕೆರಗೋರು ಹನುಮ ಧ್ವಜ ವಿವಾದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕೂಡಾ ಸಾಥ್ ನೀಡಿರುವುದರಿಂದ ಇದು ತೀವ್ರ ಸ್ವರೂಪವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕೂಡಾ ತಂತ್ರಗಾರಿಕೆಯಿಂದ ಪ್ರತಿಕ್ರಿಯೆ ನೀಡಲು ನಿರ್ಧಾರ ಮಾಡಿದೆ. ಇದೇ ವಿಚಾರವಾಗಿ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕೆರಗೋರಿನಲ್ಲಿ ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ ಅನುಮತಿ ಪಡೆದುಕೊಳ್ಳಲಾಗಿತ್ತು. 

ಆದರೆ ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ಬರೆದುಕೊಟ್ಟಿದ್ದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.