ಕೋಡಿಮಠ ಭವಿಷ್ಯ ಕೇಳಿ ಇಡೀ ಕರುನಾಡು ಕಕ್ಕಾಬಿಕ್ಕಿ, ಬೆಚ್ಚಿಬಿದ್ದ ರಾಜಕಾರಣಿಗಳು

 | 
ರರರ

ಭವಿಷ್ಯ ಹೇಳುವುದರಲ್ಲೇ ಪ್ರಖ್ಯಾತಿ ಪಡೆದ ಹಾಸನ ಜಿಲ್ಲೆಯ ಕೋಡಿಮಠದ ಪೀಠಾಧ್ಯಕ್ಷ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ  ವಿಶ್ವದಾದ್ಯಂತ ಹೆಚ್ಚುತ್ತಿರುವ ಕೊರೊನಾ  ಸೋಂಕಿನ ಭೀತಿ, ಸಂಕ್ರಾಂತಿ ಭವಿಷ್ಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ವಿಜಯನಗರ  ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ನಾಯಕಿ ರಾಣಿ ಸಂಯುಕ್ತಾ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿ, ಅಲ್ಲಿ ಪಾದಪೂಜೆ ಸ್ವೀಕರಿಸಿದರು. 

ಬಳಿಕ ಮಾತನಾಡಿದ ಕೋಡಿಮಠದ ಶ್ರೀಗಳು, ಒಲೆ ಹೊತ್ತಿ ಉರಿದರೆ ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದ್ದಾರೆ.
ಕೆಲ ದಿನಗಳ ಹಿಂದೆ 2023 ಕ್ಕ ಜಾಗತಿಕ ಮಟ್ಟದಲ್ಲಿ ದೊಡ್ಡ ರೀತಿಯ ಸಮಸ್ಯೆ ಎದುರಾಗಲಿದೆ ಅಂತ ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಸಾಧು ಸಂತರಿಗೆ ಸಮಸ್ಯೆಯಾಗುತ್ತದೆ. ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ, ಎರಡು ಮೂರು ದೊಡ್ಡ- ದೊಡ್ಡ ತಲೆಗಳು ಉರುಳುತ್ತವೆ ಅಂತ ಆತಂಕಕಾರಿ ಭವಿಷ್ಯ ಹೇಳಿದ್ದಾರೆ. 

ಇನ್ನು ಕರ್ನಾಟಕ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಅಂದಿದ್ದಾರೆ.ಈ ಹಿಂದೆ ಬೆಂಗಳೂರಿನಲ್ಲಿ ಭವಿಷ್ಯ ನುಡಿದಿದ್ದ ಶ್ರೀಗಳು, ಕರ್ನಾಟಕ ರಾಜಕೀಯ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲಾ ಪಕ್ಷಗಳು ಒಡೆಯುತ್ತದೆ ಎಂದು ನಾನು ಹಿಂದೆಯೇ ಹೇಳಿದ್ದೇನೆ. ಇದೀಗ ಈ ಮಾತುಗಳು ನಿಜವಾಗುತ್ತಿದೆ ಎಂದಿದ್ದರು. ಅಷ್ಟಕ್ಕೂ ಈ ಮಾತಿನ ಹಿನ್ನೆಲೆ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸುತ್ತಿರುವುದನ್ನು ಮುಂದಿಟ್ಟುಕೊಂಡು ಹೇಳಿದ್ದಾರೆ ಎನ್ನಲಾಗಿತ್ತು. 

ನಂತರ ಒಲೆ ಹೊತ್ತಿ ಉರಿದರೆ ಅಡುಗೆ ಆಗುತ್ತದೆ ಆದರೆ ಭೂಮಿ ಹೊತ್ತಿ ಉರಿದರೆ ಏನಾಬಹುದು ಎಂದು ಹೇಳುವ ಮೂಲಕ ಎಲ್ಲರಲ್ಲಿಯೂ ಗೊಂದಲ ಮೂಡಿಸಿದ್ದರು. ಅಲ್ಲದೇ ಈ ಬಗ್ಗೆ ಮುಂದೆ ಭವಿಷ್ಯದಲ್ಲಿ ಹೇಳುತ್ತೇವೆ ಎಂದು ತಮ್ಮ ಉತ್ತರವನ್ನು ಕಾಯ್ದಿರಿಸಿದ್ದರು. ಕೋಡಿ ಮಠ ಶ್ರೀಗಳ ಈ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಸೃಷ್ಟಿಸಿತ್ತು.ಕಾರ್ತಿಕ ಮಾರ್ಗಶಿರ, ಜನವರಿ ಪ್ರಥಮದಲ್ಲಿಯೂ ಲೋಕಕ್ಕೆ ಕಂಟಕವಿದೆ ಅಂತ ಶ್ರೀಗಳು ಈ ಹಿಂದೆ ಹೇಳಿದ್ದರು. ಪ್ರಾಕೃತಿಕವಾಗಿ, ಪ್ರಾದೇಶಿಕವಾಗಿ, ಇರಬಹುದು, ಭೂಕಂಟಕ ಇರಬಹುದು, ರಾಜಬೀದಿ ಇರಬಹುದು ಅಲ್ಲೆಲ್ಲ ಅವಘಡ ಆಗುತ್ತವೆ ಅಂತ ಹೇಳಿದ್ದರು.ಅವರು ಹೇಳಿರುವ ಭವಿಷ್ಯ ಎಲ್ಲವೂ ನಿಜವಾಗುತ್ತದೆ ಎನ್ನುವುದು ಇನ್ನೊಂದು ವಿಶೇಷವಾಗಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.