ಬಟ್ಟೆ ಬದಲಾಯಿಸುವಾಗ ಒಳ ಅಂದ ನೋಡಿದ ನಿರ್ಮಾಪಕ; ಸೀರಿಯಲ್ ನಟಿಯಿಂದ ದೂರು

 | 
Uu

ನಿರ್ಮಾಪಕರಿಂದ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಆಗಾಗ ಹೇಳಿಕೊಳ್ಳುತ್ತಲೇ ಇರುತ್ತಾರೆ. ಈಗ ಹಿಂದಿ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಅವರು ನಿರ್ಮಾಪಕರಿಂದ ಆದ ಕೆಟ್ಟ ಅನುಭವ ವಿವರಿಸಿದ್ದಾರೆ. ಯೇ ಹೇ ಮೊಹಾಬತೇ ಧಾರಾವಾಹಿ  ಮೂಲಕ ಫೇಮಸ್ ಆದ ಅವರಿಗೆ ಈಗ ದೊಡ್ಡ ಮಟ್ಟದ ಕಿರುಕುಳ ಆಗಿದೆ. ಜೊತೆಗೆ ಧಾರಾವಾಹಿಯಲ್ಲಿ ನಟಿಸಿದ್ದಕ್ಕೆ ಅವರಿಗೆ ಹಣ ಕೂಡ ಸಿಕ್ಕಿಲ್ಲ.

ಇದರಿಂದ ಅವರು ಬೇಸರ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಅಷ್ಟಕ್ಕೂ ಶುಭ ಶಗುನ್ ಹೆಸರಿನ ಧಾರಾವಾಹಿಯಲ್ಲಿ ಕೃಷ್ಣಾ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ. ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. 

ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ ಎಂದು ಅವರು ಬರೆದುಕೊಂಡಿದ್ದಾರೆ. ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು ಎಂದು ಕುಂದನ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ. 

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ ಎಂದು ಹೇಳಿಕೊಂಡಿದ್ದಾರೆ ಅವರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.