ಕೊ.ಲೆ ಮಾಡಿ ಪೋಲಿಸ್ ಠಾಣೆ ಮೇಟ್ಟಿಲೇರಿದ ಪಾಪಿಗಳು, ಅಕ್ಷಯ್ ಕಲ್ಲೇಗ ಕೊ.ಲೆ ಹಿಂದಿದೆ ರೋಚಕ ಸತ್ಯ

 | 
Gff

ಪುತ್ತೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಖ್ಯಾತನ ಹುಲಿ ವೇಷ ಕಲಾವಿದನನ್ನು ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದವರಲ್ಲಿ ಇಬ್ಬರು ಪೊಲೀಸರಿಗೆ ಶರಣಾಗಿದ್ದು, ಇನ್ನೊಬ್ಬಾತ ತಲೆ ಮರೆಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯ ಹೊರವಲಯವಾದ ನೆಹರೂನಗರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದ ಘಟನೆಯಿದು ಎನ್ನಲಾಗುತ್ತಿದೆ.

ಅಕ್ಷಯ್‌ ಮೃತದೇಹ ವಿವೇಕಾನಂದ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಗಿಡಗಂಟಿಗಳಿಂದ ಅವೃತ್ತವಾದ ಹಡೀಲು ಬಿದ್ದ ಜಾಗದಲ್ಲಿ ಬಿದ್ದಿತ್ತು. ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿದೆ. ಈ ಪೈಕಿ ಬನ್ನೂರು ನಿವಾಸಿ ಮನೀಷ್, ಚೇತು ಎಂಬುವವರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು. 

ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಅಕ್ಷಯ್‌ ವಿವೇಕಾನಂದ ಕಾಲೇಜ್‌ ಬಳಿ ನಿವಾಸಿಯಾಗಿದ್ದು, ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್‌ ಎಂಬ ಹುಲಿವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಈ ತಂಡ ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿತ್ತು. 

ಹುಲಿ ಕುಣಿತದ ಪಂಥ ಕೂಟಗಳಲ್ಲಿ ಪ್ರಶಸ್ತಿಗಳನ್ನು ಬಾಚಿತ್ತು. ಈ ಮೂಲಕ ಪುತ್ತೂರಿನಲ್ಲಿ ಹುಲಿ ಕುಣಿತ ತಂಡಕ್ಕೆ ಸ್ಟಾರ್‌ ಗಿರಿಯನ್ನು ತಂದುಕೊಟ್ಟಿದ್ದರು ಎಂದು ಅಕ್ಷಯ್ ನನ್ನು ಬಲ್ಲವರು ತಿಳಿಸುತ್ತಾರೆ. ಕೆಲ ಗಂಟೆಗಳ ಮೊದಲು ವಾಹನ ನಿಲುಗಡೆಯ ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.Hbg

ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ.
ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನರಾ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್‌ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲಾವರುನಿಂದ ದಾಳಿ ನಡೆಸಿದ್ದಾರೆ. 

ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಲಾಗಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳು ಕಂಡುಬಂದಿವೆ ಎಂದು ಪೋಲಿಸರು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.